ಆಕ್ಸಿಜನ್ ಬೆಡ್ ಕುರಿತು ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ: ಸರ್ಕಾರಕ್ಕೆ 'ಹೈ' ಸೂಚನೆ

ಸೇನಾ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಒದಗಿಸುವ ಸಂಬಂಧ ಸೇನಾಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸೇನಾ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಒದಗಿಸುವ ಸಂಬಂಧ ಸೇನಾಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. 

ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಅವರಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಕಡಿಮೆ ಪ್ರಮಾಣದಲ್ಲಿ ಹಾಸಿಗೆ ಹೆಚ್ಚಳ ಮಾಡುವುದರಿಂದ ದೊಡ್ಡ ವ್ಯತ್ಯಾಸವಾಗುವುದಿಲ್ಲ. ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 22 ಸಾವಿರ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಬೆಂಗಳೂರಿನಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಮತ್ತು ಸರ್ಕಾರ ಶಾಶ್ವತವಾಗಿ ಕೋವಿಡ್ ಆಸ್ಪತ್ರೆಗಳ ಮುಂದೆ ಹೆಲ್ಪ್ ಡೆಸ್ಕ್ ಸ್ಥಾಪಿಸಬೇಕು ಎಂದು ಹೇಳಿತು.

ವಿಚಾರಣೆಗೂ ಮುನ್ನ ಕೇಂದ್ರದ ಪರ ವಕೀಲರು, ಸೇನಾ ಆಸ್ಪತ್ರೆಯಲ್ಲಿ ಲಭ್ಯವಿರುವ ಹಾಸಿಗೆಗಳನ್ನು ರಕ್ಷಣಾ ಸಿಬ್ಬಂದಿ ಮಾತ್ರ ನೀಡಬೇಕೆಂಬ ನಿರ್ದೇಶನಗಳಿವೆ. ಹೀಗಾಗಿ ಈ ಹಾಸಿಗೆಗಳನ್ನು ನಾಗರಿಕರಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. 

ಬಳಿಕ ಮಾತನಾಡಿದ ನ್ಯಾಯಪೀಠ, ಈಗಾಗಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸೇನಾ ಆಸ್ಪತ್ರೆಗಳಲ್ಲಿ ನಾಗರೀಕರಿಗೆ ಚಿಕಿತ್ಸೆ ನೀಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಪರಿಸ್ಥಿತಿ ಭೀಕರವಾದಾಗ, ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ಸಶಸ್ತ್ರ ಪಡೆಗಳು ಯಾವಾಗಲೂ ಶೀಘ್ರಗತಿಯಲ್ಲಿ ಸ್ಪಂದಿಸುತ್ತಾರೆ. ಆಮ್ಲಜನಕ ಸಹಿತ ಹಾಸಿಗೆಗಳ ಸ್ಥಾಪನೆ ಮೂಲಕ ಸೇನೆಯು ನಾಗರಿಕರಿಗೆ ಸಹಾಯ ಮಾಡುತ್ತದೆ ಎಂದು ನಾವು ಆಶಿಸುತ್ತೇವೆಂದು ಹೇಳಿತು. 

ಅಲ್ಲದೆ, ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com