ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು. 
ದೇವೇಗೌಡ-ಬಸವರಾಜ್ ಬೊಮ್ಮಾಯಿ-ರೇವಣ್ಣ
ದೇವೇಗೌಡ-ಬಸವರಾಜ್ ಬೊಮ್ಮಾಯಿ-ರೇವಣ್ಣ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು ಮತ್ತು ರಾಜ್ಯ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಈ ಹಿಂದೆ ದೇವೇಗೌಡ ಮತ್ತು ಬೊಮ್ಮಾಯಿ ರಾಜಕಾರಣದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಆದ್ದರಿಂದ ಅದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಹಿರಿಯ ಜೆಡಿಎಸ್ ವರಿಷ್ಠರು ಜನತಾ ಆಡಳಿತಾವಧಿಯಲ್ಲಿ ಹಾಲಿ ಸಿಎಂ ತಂದೆ ಎಸ್ ಆರ್ ಬೊಮ್ಮಾಯಿ ಅವರೊಂದಿಗೆ ಕೆಲಸ ಮಾಡಿದ್ದರು.

ದೇವೇಗೌಡರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ದೇವೇಗೌಡರು ಒಬ್ಬ ಶ್ರೇಷ್ಠ ನಾಯಕ ಮತ್ತು ಪ್ರಧಾನಿಯಾಗಿದ್ದರು. ಅವರು ತಮ್ಮ ತಂದೆ ಎಸ್.ಆರ್. ಬೊಮ್ಮಾಯಿ ಅವರ ಜೊತೆಯೂ ಕೆಲಸ ಮಾಡಿದರು. ಆದ್ದರಿಂದ, ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದಿದ್ದೇನೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ನೀರಾವರಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಅವರು ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಏನನ್ನೂ ಚರ್ಚಿಸಿಲ್ಲ,  ಈ ಹಿಂದೆ ಜಲಸಂಪನ್ಮೂಲ ಮಂತ್ರಿಯಾಗಿದ್ದಾಗ ಅವರ ಮಾರ್ಗದರ್ಶನವನ್ನು ಕೇಳಿದ್ದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com