ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಸಾವು: ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ 27 ವರ್ಷದ ಕಾಂಗೋ ಪ್ರಜೆ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ. 
ಬೆಂಗಳೂರು ಪೊಲೀಸರು
ಬೆಂಗಳೂರು ಪೊಲೀಸರು

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ 27 ವರ್ಷದ ಕಾಂಗೋ ಪ್ರಜೆ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ. 

ಭಾನುವಾರ ರಾತ್ರಿ ಮಾದಕ ದ್ರವ್ಯ ಸಾಗಾಟದ ಆರೋಪದ ಮೇಲೆ ಕಾಂಗೋ ಪ್ರಜೆ ಜೋವಾ ಅಲಿಯಾಸ್ ಜೋಯೆಲ್ ಶಿಂದಾನಿ ಮಾಲು ಬಂಧಿಸಲಾಗಿತ್ತು. ಬಂಧನದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಹೋಗಿ ಕುಸಿದುಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಹೃದಯ ಸ್ತಂಭನದಿಂದಾಗಿ ಕಸ್ಟಡಿಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಇದು ಲಾಕಪ್ ಡೆತ್ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿ ಜೆಸಿ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. 

ಪ್ರತಿಭಟನೆ ವೇಳೆ ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಅಲ್ಲದೆ ಇದೇ ಸಂದರ್ಭದಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. 

ಇನ್ನು ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೃತ ವ್ಯಕ್ತಿ ಪತ್ನಿಯೊಂದಿಗೆ ವಾಸವಾಗಿದ್ದು ಖಾಸಗಿ ಕಾಲೇಜಿನಲ್ಲಿ ಬಿಬಿಎ ಪದವಿಯಲ್ಲಿ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಿಯಮದ ಪ್ರಕಾರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಇಬ್ಬರು ವೈದ್ಯರು ಮತ್ತು ಜರ್ಡ್ ಸಮ್ಮುಖದಲ್ಲಿ ಪೋಸ್ಟ್ ಮಾರ್ಟಮ್ ಮಾಡಲಾಗುತ್ತಿದೆ. ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿ ನಿಯಮ ಪಾಲನೆ ಮಾಡಿದ್ದಾರೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ಕಮಿಷನಲ್ ಕಮಲ್ ಪಂತ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com