ನೈಜಿರಿಯನ್ ಪ್ರಜೆ ಸಾವು: ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಪೊಲೀಸರಿಂದ ಲಾಠಿ ಚಾರ್ಜ್

ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ ನೈಜಿರಿಯನ್ ಪ್ರಜೆಗಳು ಪ್ರತಿಭಟನೆ ನಡೆಸಿದರು. 
ಪ್ರತಿಭಟನೆ ಚಿತ್ರ
ಪ್ರತಿಭಟನೆ ಚಿತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ ನೈಜಿರಿಯನ್ ಪ್ರಜೆಗಳು ಪ್ರತಿಭಟನೆ ನಡೆಸಿದರು. 

ಇನ್ನು ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೈಜಿರಿಯನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದು ಹಲವರನ್ನು ಬಂಧಿಸಿದ್ದಾರೆ. 

ಡ್ರಗ್ಸ್ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನೈಜಿರಿಯನ್ ಪ್ರಜೆ ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆದರೆ ಪೊಲೀಸರು ಆತನನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. 

ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವನ್ನಪ್ಪಿದ್ದಾನೆ. ವೈದ್ಯರು ಹೃದಯಾಘಾತದಿಂದಾಗಿ ಆತ ಮೃತಪಟ್ಟಿರುವುದಾಗಿ ವರದಿ ನೀಡಿದ್ದಾರೆ. ಆದರೆ ನೈಜಿರಿಯನ್ ಪ್ರಜೆಗಳು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿ ಇಂದು ಜೆಸಿ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com