ಬೇರೆ ವಲಯದಲ್ಲಿ ತೆರಿಗೆ ಪಾವತಿ: ದಂಡ ಪಾವತಿಸುವಂತೆ ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ನೋಟಿಸ್

ಆಸ್ತಿ ತೆರಿಗೆ ಪಾವತಿ ವಿಚಾರದಲ್ಲಿ ಬೆಂಗಳೂರಿನ ಹಲವು ನಿವಾಸಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ವಿಚಾರದಲ್ಲಿ ಬೆಂಗಳೂರಿನ ಹಲವು ನಿವಾಸಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ.

ಹೌದು.. ತಾವಿರುವ ವಲಯವಲ್ಲದೇ ಬೇರೆ ವಲಯದಲ್ಲಿ ಆಸ್ತಿ ತೆರಿಗೆ ಪಾವತಿಸಿದ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ನಿವಾಸಿಗಳಿಗೆ ಬಿಬಿಎಂಪಿ ಅಧಿಕಾರಿಗಳು ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಷನ್ ನ ಸಾಮಾನ್ಯ ಕಾರ್ಯದರ್ಶಿಗಳು ವಲಯ ವರ್ಗೀಕರಣಕ್ಕೂ ತೆರಿಗೆದಾರರಿಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಬಿಬಿಎಂಪಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು, 'ಬಿಬಿಎಂಪಿಯಲ್ಲಿ ಯಾವುದೇ ತಾಂತ್ರಿಕ ದೋಷವಿಲ್ಲ. ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆ ವ್ಯವಸ್ಥೆಯು ಸ್ವಯಂ ಮೌಲ್ಯಮಾಪನ ವ್ಯವಸ್ಥೆಯಾಗಿದೆ. ಕೆಲವು ಸಂದರ್ಭಗಳಲ್ಲಿ, ಜನರು ಸರಿಯಾದ ವಲಯ ವರ್ಗೀಕರಣವನ್ನು ಆಯ್ಕೆ ಮಾಡಿಲ್ಲ. ಈ  ಕಾರಣಕ್ಕಾಗಿ ತೆರಿಗೆ ಪಾವತಿ ಸಂಗ್ರಹ ಕಡಿಮೆಯಾಗಿದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com