ಮಹಾರಾಷ್ಟ್ರದ ವಿದರ್ಭ ಮಾರುಕಟ್ಟೆಗೆ ಲಗ್ಗೆಯಿಟ್ಚ ಕೆಎಂಎಫ್ ನಂದಿನಿ ಹಾಲಿನ ಉತ್ಪನ್ನಗಳು

ರಾಜ್ಯದ ಹೆಮ್ಮೆಯ ಸಂಸ್ಥೆ, 'ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ವು ತನ್ನ ಉದ್ಯಮವನ್ನು ರಾಜ್ಯದಾಚೆಗೂ ವಿಸ್ತರಿಸುತ್ತಿದೆ.
ಕೆಎಂಎಫ್ ಉತ್ಪನ್ನ ಬಿಡುಗಡೆ ಮಾಡಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್
ಕೆಎಂಎಫ್ ಉತ್ಪನ್ನ ಬಿಡುಗಡೆ ಮಾಡಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್

ಬೆಂಗಳೂರು: ರಾಜ್ಯದ ಹೆಮ್ಮೆಯ ಸಂಸ್ಥೆ, 'ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ವು ತನ್ನ ಉದ್ಯಮವನ್ನು ರಾಜ್ಯದಾಚೆಗೂ ವಿಸ್ತರಿಸುತ್ತಿದೆ. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬ್ರಾಂಡ್ ಹೊಂದಿರುವ ಕೆಎಂಎಫ್‌ ಮಹಾರಾಷ್ಟ್ರದ ವಿದರ್ಭ ಪ್ರದೇಶಕ್ಕೆ ಪಾದಾರ್ಪಣೆ ಮಾಡಿದೆ.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್ದಲ್ಲಿ  ಮಹಾರಾಷ್ಟ್ಪ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಚಾಲನೆ ನೀಡಿ ಮಾತನಾಡಿದರು,  ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಲಾಗುತ್ತಿದೆ. ನಮ್ಮಲ್ಲಿಯೂ ಸಹ ಇದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು ಕೆಲಸ ಮಾಡಿದ್ದಾದರೇ ರೈತ ಸಮೂಹಕ್ಕೆ ಇದರಿಂದ ಅನುಕೂಲವಾಗುತ್ತದೆ ಎಂದು ಹೇಳಿದರು.

ವಿದರ್ಭ ಭಾಗದಿಂದ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟವನ್ನು ಆರಂಭಿಸಿರುವುದು ಖುಷಿಯಾಗಿದೆ. ಸ್ಪರ್ಧಾತ್ಮಕ ದರದಲ್ಲಿ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನೀಡುತ್ತಿರುವುದನ್ನು ನಾನು ಕೇಳಿದ್ದೇನೆ. ಗ್ರಾಹಕರ ನೆಚ್ಚಿನ ನಂದಿನಿ ಉತ್ಪನ್ನಗಳು ಕರ್ನಾಟಕದಲ್ಲಿ ಮನೆ ಮಾತಾಗಿರುವುದನ್ನು ಗಮನಿಸಿದ್ದೇನೆ. ಸಹಕಾರಿ ತತ್ವವನ್ನು ಪರಿಪಾಲನೆ ಮಾಡಿಕೊಂಡು ಬರುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು ಮಹಾರಾಷ್ಟ್ರದ ಪ್ರತಿ ಮನೆ ಮನೆಗೆ ತಲುಪಲಿ ಎಂದು ಫಡ್ನಾವಿಸ್ ಆಶಿಸಿದರು.
 
ಸಹಕಾರಿ ಕ್ಷೇತ್ರವು ವ್ಯವಹಾರಿಕವಾಗಿ ಅಭಿವೃದ್ದಿ ಹೊಂದಲು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೇಂದ್ರದಲ್ಲಿ ಸಹಕಾರಿ ಸಚಿವಾಲಯವನ್ನು ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಕೆಎಂಎಫ್ ನಂತಹ ಸಂಸ್ಥೆಗಳು ಕರ್ತವ್ಯ ನಿರ್ವಹಿಸಿ ಸಹಕಾರಿ ರಂಗದ ಬೆಳವಣಿಗೆಗೆ ಶ್ರಮಿಸಲಿ ಎಂದರು.

ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕೆಎಂಎಫ್ ರಾಷ್ಟ್ರದ ಎರಡನೇ ಅತೀ ದೊಡ್ಡ ಸಹಕಾರಿ ಹಾಲು ಮಹಾಮಂಡಳಿಯಾಗಿದ್ದು, ಪ್ರತಿನಿತ್ಯ ರಾಜ್ಯದ ಹೈನುಗಾರ ರೈತರಿಂದ 90 ಲಕ್ಷ ಲೀಟರ್ ಹಾಲು ಶೇಖರಣೆ ಮಾಡಿ ನಿತ್ಯ ಅಂದಾಜು 24 ಕೋಟಿ ಹಣ ರೈತರಿಗೆ ಪಾವತಿಸಲಾಗುತ್ತಿದೆ. ರಾಜ್ಯದ ರೈತರಿಂದ ಶೇಖರಿಸುವ ಹಾಲನ್ನು ಸಂಸ್ಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಉತ್ಕ್ರಷ್ಟ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಕಾಲಕ್ಕೆ ಒದಗಿಸುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com