ಕೋವಿಡ್-19: ಕರ್ನಾಟಕ-ಕೇರಳ ಗಡಿಯಲ್ಲಿ ನಿರ್ಬಂಧಗಳ ಮುಂದುವರಿಕೆ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಕೇರಳದಲ್ಲಿ ಕೊರೋನಾ ಸೋಂಕು ಉಲ್ಪಣವಾಗಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರೆಸಲಾಗುತ್ತದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ
ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ

ಮಂಗಳೂರು: ಕೇರಳದಲ್ಲಿ ಕೊರೋನಾ ಸೋಂಕು ಉಲ್ಪಣವಾಗಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರೆಸಲಾಗುತ್ತದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕರ್ನಾಟಕ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಿ ಎಚ್ ಪ್ರತಾಪ್ ರೆಡ್ಡಿ ಅವರು, ಕೇರಳದಲ್ಲಿ ಪರೀಕ್ಷಾ ಧನಾತ್ಮಕ ದರ (test positivity rate) ಕಡಿಮೆಯಾಗುವವರೆಗೂ ಗಡಿ ಜಿಲ್ಲೆಗಳಲ್ಲಿ ನಿರ್ಬಂಧಗಳು ಮುಂದುವರೆಯುತ್ತದೆ. ಕೇರಳದಿಂದ ಕರ್ನಾಟಕಕ್ಕೆ ಬರುವವರು  ಕಡ್ಡಾಯವಾಗಿ ಕೋವಿಡ್ ಪರೀಕ್ಷಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.

ಇಂದು ತಲಪಾಡಿ ಅಂತರ್ ರಾಜ್ಯ ಗಡಿಗೆ ಭೇಟಿ ನೀಡಿ ಸಿ ಎಚ್ ಪ್ರತಾಪ್ ರೆಡ್ಡಿ ಅವರು, ಕೇರಳದಲ್ಲಿ ಸೋಂಕು ಪ್ರಸರಣ ಹೆಚ್ಚಾಗಿರುವ ಹಿನ್ನಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಹೀಗಾಗಿ ನಾವೂ ಕೂಡ ಜಿಲ್ಲಾಡಳಿತದ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದರು.  

'ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಅನುಸರಿಸಿ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೇರಳೀಯರ ಸಂಚಾರಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಸರ್ಕಾರವು ಕೇರಳದ ಜನರಿಗೆ RT-PCR negative ವರದಿಯನ್ನು ಕಡ್ಡಾಯಗೊಳಿಸಿದೆ. ತುರ್ತು  ಉದ್ದೇಶಗಳಿಗಾಗಿ ಪ್ರಯಾಣಿಸುವವರಿಗೆ ಮತ್ತು ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಹಾಲ್ ಟಿಕೆಟ್ ಇಲ್ಲದ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ಬಳಸಬಹುದು. ಈ ನಿರ್ಬಂಧಗಳು ಕೇರಳದಲ್ಲಿ ಧನಾತ್ಮಕ ದರ ಸಾಮಾನ್ಯ ಮಟ್ಟಕ್ಕೆ ಇಳಿಯುವವರೆಗೆ  ಮುಂದುವರಿಯುತ್ತವೆ ಎಂದು ಹೇಳಿದರು.

ಅಂತೆಯೇ ರೈಲುಗಳ ಮೂಲಕ ಪ್ರಯಾಣಿಸುವವರಿಗೆ, ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳನ್ನು ಹೊಂದಿರುವವರಿಗೆ ಪ್ರಯಾಣಿಸಲು ಅವಕಾಶವಿದೆ. "ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳಿಲ್ಲದ ರೈಲು ಪ್ರಯಾಣಿಕರಿಗೆ, ಜಿಲ್ಲಾಡಳಿತ ಮಂಗಳೂರಿನ ಟೌನ್ ಹಾಲ್‌ನಲ್ಲಿ ಪರೀಕ್ಷೆ ಹಾಗೂ ಸಂಪರ್ಕತಡೆಯನ್ನು ತೆರೆದಿದೆ.  ಕೋವಿಡ್-19 ಗೆ ಸೋಂಕು ಪಾಸಿಟಿವ್ ವರದಿ ಬಂದಿರುವವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ (ಸಿಸಿಸಿ) ವರ್ಗಾಯಿಸಲಾಗುತ್ತದೆ. ಅಂತರ್ ರಾಜ್ಯ ಗಡಿಯಲ್ಲಿ ನಾವು ಈಗ ಆರ್‌ಟಿ-ಪಿಸಿಆರ್ ಪರೀಕ್ಷಾ ಕೇಂದ್ರಗಳನ್ನು ಆರಂಭಿಸುವುದಿಲ್ಲ. ನಾವು ಕೇರಳದ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ ಮತ್ತು  ಆಯಾ ಜಿಲ್ಲೆಗಳು ನಡೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಪ್ರಯಾಣಿಕರು ತೆಗೆದುಕೊಳ್ಳುವ ವ್ಯಾಕ್ಸಿನೇಷನ್ ಡೋಸ್‌ಗಳ ಹೊರತಾಗಿಯೂ ಪ್ರವೇಶದ ನಿರ್ಬಂಧಗಳ ಬಗ್ಗೆ ಮಾತನಾಡಿ ಎಡಿಜಿಪಿ ಅವರು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com