ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಬಾಕಿ ಅನುದಾನ ಶೀಘ್ರ ಬಿಡುಗಡೆ ಮಾಡಿ: ಸರ್ಕಾರಕ್ಕೆ ಹೊರಟ್ಟಿ ಆಗ್ರಹ

ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಪರಿಷತ್ ಸದಸ್ಯರ ಜೊತೆಗೆ ಸಭೆ ನಡೆಸುತ್ತಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಪರಿಷತ್ ಸದಸ್ಯರ ಜೊತೆಗೆ ಸಭೆ ನಡೆಸುತ್ತಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಗ್ರಹಿಸಿದ್ದಾರೆ. 

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನ ಕಡಿತ ಕುರಿತು ವಿಧಾನಸೌಧದಲ್ಲಿ ನಿನ್ನೆಯಷ್ಟೇ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರ ಜೊತೆಗೆ ಸಭೆ ನಡೆಸಿದರು. 

ಬಳಿಕ ಮಾತನಾಡಿದ ಅವರು, ಪ್ರಸ್ತುತ ವಿಧಾನ ಪರಿಷತ್ ಸದಸ್ಯರಿಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಆಗುತ್ತಿಲ್ಲ. ಇನ್ನು ನಿಗದಿತ ಅನುದಾನವನ್ನೂ ಬಿಡುಗಡೆ ಮಾಡದೆ ಹಣಕಾಸು ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗಾಗಿ ಅನುದಾನ ನಿರ್ವಹಣೆ ಕುರಿತು ಪ್ರತ್ಯೇಕ ಸಮಿತಿ ರಚನೆ ಮಾಡಬೇಕು. ಪ್ರಸ್ತುತ ಪರಿಷತ್ ಸದಸ್ಚರಿಗೆ ನೀಡುತ್ತಿರುವ ರೂ.600 ಕೋಟಿ ಅನುದಾನದ ಮೊತ್ತವನ್ನು ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ವರದಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಿಡುಗಡೆ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಹಾಗೂ ಕಾಲ ಮಿತಿಯಲ್ಲಿ ಅನುದಾನ ಬಡುಗಡೆ ಆಗುವ ಕುರಿತು ಒಂದು ಸಮಿತಿ ರಚನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com