ಕೋವಿಡ್-19: ಆಗಸ್ಟ್​ 16ರವರೆಗೆ ಬೆಂಗಳೂರಿನಲ್ಲಿ ನೈಟ್​ ಕರ್ಫ್ಯೂ ಮುಂದುವರಿಕೆ

ನಗರದಲ್ಲಿ ಕೊರೋನಾ ಸೋಂಕು ಏರಿಕೆ ಭೀತಿ ಹಿನ್ನಲೆಯಲ್ಲಿ ಆಗಸ್ಟ್​ 16ರವರೆಗೆ ಬೆಂಗಳೂರಿನಲ್ಲಿ ನೈಟ್​ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. 
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ (ಪಿಟಿಐ ಚಿತ್ರ)
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ (ಪಿಟಿಐ ಚಿತ್ರ)

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಏರಿಕೆ ಭೀತಿ ಹಿನ್ನಲೆಯಲ್ಲಿ ಆಗಸ್ಟ್​ 16ರವರೆಗೆ ಬೆಂಗಳೂರಿನಲ್ಲಿ ನೈಟ್​ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. 

ಕೊರೊನಾ ಮೂರನೇ ಅಲೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ, ಹಾಸನ ಜಿಲ್ಲೆಯಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲೂ ಕೂಡ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಬೆಂಗಳೂರಲ್ಲಿ ನೈಟ್​ ಕರ್ಫ್ಯೂ ಇರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 

ಬೆಂಗಳೂರಿನಲ್ಲಿ ಆಗಸ್ಟ್ 16ರ ವರೆಗೆ ನಿಷೇದಾಜ್ಞೆ ಮುಂದುವರೆಸಿ ಆದೇಶ ಹೊರಡಿಸಲಾಗಿದ್ದು, ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ ನಿಲ್ದಾಣ, ಏರ್‌ಪೋರ್ಟ್ ಹೊರತುಪಡಿಸಿ ಉಳಿದೆಡೆ ಜನರು ಗುಂಪು ಸೇರದಂತೆ ಸೂಚನೆ ನೀಡಲಾಗಿದೆ. ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗದಂತೆ ಮುನ್ನೆಚ್ಚರಿಕಾ  ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com