ಗುರುವಾರದಿಂದ ಕರಾವಳಿಯಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್

ರಾಜ್ಯದ ಕೆಲ ಜಿಲ್ಲೆಗಳಲ್ಲಿ  ಮಳೆಯ ಅರ್ಭಟ  ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಸಾಂದರ್ಭಿಕ ಚಿತ್ರ
ಮಳೆಯ ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ  ಮಳೆಯ ಅರ್ಭಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರದಿಂದ  ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾದರೆ, ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇದರ ಜೊತೆಗೆ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು  ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ  ವರದಿ ಹೇಳಿದೆ.
                

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com