ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಐಟಿ ಶಾಕ್: ಚಾಮರಾಜಪೇಟೆ ಶಾಸಕರ ಮನೆ ಮೇಲೆ ದಾಳಿ, ಪರಿಶೀಲನೆ

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 
ಜಮೀರ್ ಆಹ್ಮದ್ ಖಾನ್
ಜಮೀರ್ ಆಹ್ಮದ್ ಖಾನ್

ಬೆಂಗಳೂರು: ಕಾಂಗ್ರೆಸ್ ನ ಚಾಮರಾಜಪೇಟೆ​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್​ ಮನೆಯ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಜಮೀರ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಭಾರಿ ದೊಡ್ಡ ತಂಡದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ.  ಮನೆ, ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com