ಅತಿವೃಷ್ಟಿಯಿಂದ ಬೆಳಗಾವಿಯಲ್ಲಿ ರೂ.7,800 ಕೋಟಿ ಹಾನಿ: ಸಚಿವ ಗೋವಿಂದ ಕಾರಜೋಳ

ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ ಸೇತುವೆ ಇತರೆ ಮೂಲಸೊಕರ್ಯಗಳು ಸೇರಿದಂತೆ ಸುಮಾರು ರೂ.7800 ಕೋಟಿ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಶುಕ್ರವಾರ ಹೇಳಿದ್ದಾರೆ. 
ಸಭೆ ನಡೆಸುತ್ತಿರುವ ಸಚಿವ ಗೋವಿಂದ ಕಾರಜೋಳ
ಸಭೆ ನಡೆಸುತ್ತಿರುವ ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ ಸೇತುವೆ ಇತರೆ ಮೂಲಸೊಕರ್ಯಗಳು ಸೇರಿದಂತೆ ಸುಮಾರು ರೂ.7800 ಕೋಟಿ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಶುಕ್ರವಾರ ಹೇಳಿದ್ದಾರೆ. 

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ಪ್ರವಾಹ ಸ್ಥಿತಿ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಅವರು, 21,300 ವಿದ್ಯುತ್ ಕಂಬಗಳು ಹಾಗೂ 53,000 ಟ್ರಾನ್ಸ್ ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ ಅಂದಾಜು ಮಾಡಬೇಕೆಂದು ಸೂಚಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ರವಾಹದಿಂದ ಜಿಲೆಯಲ್ಲಿ ಬೆಳೆ, ರಸ್ತೆ ಆಸ್ಪತ್ರೆ-ಶಾಲಾ ಕಟ್ಟಡಗಳು ಇತರೆ ಮೂಲಸೌಕರ್ಯ ಸೇರಿದಂತೆ ಒಟ್ಟಾರೆ ಅಂದಾಜು ರೂ.7800 ಕೋಟಿ ಅಧಿಕ ನಷ್ಟವಾಗಿದೆ. ಸಮೀಕ್ಷೆ ಬಳಿಕ ಖಚಿತ ಮಾಹಿತಿ ಲಭಿಸಲಿದೆ. ಜಂಟಿ ಸಮೀಕ್ಷೆ ಕೂಡಲೇ ಪೂರ್ಣಗೊಳಿಸಬೇಕು, ಜಮೀನಿನಲ್ಲಿ ನೀರಿರುವುದರಿಂದ ಒಂದು ವೇಳೆ ಸಮೀಕ್ಷೆಗೆ ಅಡ್ಡಿಯಾದರೆ ಜಿಪಿಎಸ್ ಆಧಾರಿತ ಸಮೀಕ್ಷೆಯ ಸಾಧ್ಯತೆ ಕುರಿತು ಪರಿಶೀಲಿಸಬೇಕೆಂದು ಸೂಚಿಸಿದರು. 

ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ಸಸ್ತರಾಗುವ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ಬಡಾವಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು. ಪುನರ್ವಸತಿ ಕಾಯ್ದೆ ಪ್ರಕಾರ ಸಂತ್ರಸ್ತರಿಗೆ 40*60 ಅಳತೆಯ ನಿವೇಶನದಲ್ಲಿ ಸೂರು ಒದಗಿಸಲು ಸಮರ್ಪಕ ಯೋಜನೆ ರೂಪಿಸಬೇಕು ಎಂದ ಅವರು, ಮುಳುಗಡೆಯಾಗುವ ಗ್ರಾಮಗಳ ಜನರಿಗೆ ತಾತ್ಕಾಲಿಕ ಶೆಟ್ ನಿರ್ಮಿಸಿ ಮೂಲಸೌಕರ್ಯವನ್ನು ಒದಗಿಸಬೇಕು. ಈ ಬಗ್ಗೆ ಪರಿಶೀಲಿಸಿ ಮಾಹಿತಿ ಒದಗಿಸಬೇಕೆಂದು ತಿಳಿಸಿದರು. 

ಇದೇ ವೇಳೆ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ಘೋಷಿಸಿರುವ ರೂ. 10 ಸಾವಿರ ಪರಿಹಾರವನ್ನು ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ಪಾವತಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ 560 ಹಳ್ಳಿ ರಸ್ತೆಗಳು ಹಾಳಾಗಿವೆ. ಆ ಇಲಾಖೆಗೆ ಒಟ್ಟು ರೂ. 772 ಕೋಟಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 300 ಕಿ.ಮೀ. ರಸ್ತೆ, 70 ಸೇತುವೆಗಳು ಹಾಳಾಗಿ ರೂ.300 ಕೋಟಿ ಹಾನಿಯಾಗಿದೆ. ಮನೆಗಳಿಗೆ ಸಂಬಂಧಿಸಿದ ಹಾನಿ ರೂ. 150 ಕೋಟಿ ಆಗಿದೆ. ಬೆಳೆ ಹಾನಿಯ ಮೊತ್ತವೇ ರೂ.1,430 ಕೋಟಿ ಆಗುತ್ತದೆ ಎಂದು ಅಂದಾಜಿಸಲಾಗಿದೆ. 7,350 ಕೋಳಿಗಳು ಕೊಚ್ಚಿ ಹೋಗಿವೆ. ‘ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಪರಿಹಾರವನ್ನು ಆರ್.ಟಿ.ಜಿ.ಎಸ್‌. ಮೂಲಕ ಸಂತ್ರಸ್ತರ ಖಾತೆಗಳಿಗೆ ಪಾವತಿಸಲು ಸೂಚಿಸಲಾಗಿದೆ. ಚೆಕ್‌ ಅಥವಾ ನಗದು ಕೊಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಕೆಲವರು ಕೈಚಳಕ ಮಾಡುತ್ತಾರೆ. ಹೀಗಾಗಿ, ಅದಕ್ಕೆ ಅವಕಾಶ ಕೊಡುದಂತೆ ತಿಳಿಸಿದ್ದೇನೆ. 

‘ಜಿಲ್ಲಾಧಿಕಾರಿ ಖಾತೆಯಲ್ಲಿ ರೂ.92 ಕೋಟಿ ರೂಪಾಯಿ ಇದೆ. ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮತ್ತಿತರ ಮೂಲಸೌಕರ್ಯಗಳ ತುರ್ತು ದುರಸ್ತಿಗೆ ರೂ.120 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ 2019–20ರಲ್ಲಿ ರೂ.1,725, 2020–21ನೇ ಸಾಲಿನಲ್ಲಿ ರೂ.725 ಕೋಟಿಯನ್ನು ಮಾರ್ಗಸೂಚಿ ಪ್ರಕಾರ ಬಿಡುಗಡೆ ಮಾಡಿದೆ. ಈ ಬಾರಿಯ ಹಾನಿ ವರದಿ ಸಲ್ಲಿಸಿದ ಬಳಿಕ ಅಧ್ಯಯನ ತಂಡ ಕಳುಹಿಸಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com