
ನಮ್ಮ ಮೆಟ್ರೋ ರೈಲು(ಸಾಂದರ್ಭಿಕ ಚಿತ್ರ)
ಬೆಂಗಳೂರು: ಆಗಸ್ಟ್ 11, 12ರಂದು ಎರಡು ದಿನಗಳ ಕಾಲ ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗ ಸ್ಥಗಿತಗೊಳ್ಳಲಿದೆ.
ಈ ಬಗ್ಗೆ ಸ್ವತಃ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು. ಈ ಕುರಿತಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
Karnataka | Train services between Vijayanagar & Mysuru road stations will remain closed on 11th & 12th August, in view of commissioning of the Western extension of Purple line from Mysuru Road to Kengeri Metro Station: CPRO, Bangalore Metro Rail Corporation Limited pic.twitter.com/ejMBslAP9G
— ANI (@ANI) August 7, 2021
ನೂತನ ಮಾರ್ಗದ ಕೆಲಸದ ನಿಮಿತ್ತ ಮೆಟ್ರೋ ಸೇವೆ (Bengaluru Namma Metro) ಸ್ಥಗಿತಗೊಳ್ಳಲಿದೆ. ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ ಮೆಟ್ರೋ ಮಾರ್ಗದ ಕೆಲಸ ನಡೆಯುವ ಕಾರಣ ಈ ಮಾರ್ಗದಲ್ಲಿ ಎರಡು ದಿನಗಳ ಕಾಲ ಸೇವೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೆಟ್ರೋ ಸೇವೆ ರಾತ್ರಿ 8 ಗಂಟೆವರೆಗೆ ಮಾತ್ರ!
ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನಮ್ಮ ಮೆಟ್ರೋ ರೈಲು ಸೇವೆಯನ್ನು ಒಂದು ಗಂಟೆ ಕಡಿತ ಮಾಡಲಾಗಿದ್ದು, ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆಯು ಲಭ್ಯ ಇರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೆ ಮೆಟ್ರೋ ರೈಲು ಸೇವೆ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.