ನಗರ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನಲ್ಲಿ  ಕಟ್ಟುನಿಟ್ಟಾದ ನೈಟ್ ಕರ್ಫ್ಯೂ: ಗೌರವ್ ಗುಪ್ತಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ನಗರ ಪೊಲೀಸರ ಸಹಾಯದಿಂದ ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಶನಿವಾರ ಹೇಳಿದ್ದಾರೆ.
ಗೌರವ್ ಗುಪ್ತಾ
ಗೌರವ್ ಗುಪ್ತಾ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ನಗರ ಪೊಲೀಸರ ಸಹಾಯದಿಂದ ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಶನಿವಾರ ಹೇಳಿದ್ದಾರೆ.

ರೂಪಾಂತರವನ್ನು ಲೆಕ್ಕಿಸದೆ. ಕೋವಿಡ್-ಪಾಸಿಟಿವ್ ಜನರ ಮನೆಗಳಲ್ಲಿ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದ್ದು, ಮನೆಯ ಪ್ರತ್ಯೇಕತೆ ಮತ್ತು ಅಗತ್ಯ ಸೌಲಭ್ಯಗಳಿಗೆ ಸಾಕಷ್ಟು ಸ್ಥಳವಿದೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವ್ ದರವನ್ನು ಆಧರಿಸಿ ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ವಿಚಾರದಲ್ಲಿ ಸರ್ಕಾರವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗುಪ್ತಾ ಹೇಳಿದರು. ಪ್ರಸ್ತುತ, ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ, ಮತ್ತು ಇದು ಗಡಿ ಜಿಲ್ಲೆಗಳಿಗೆ ಸೀಮಿತವಾಗಿದೆ. ಪಾಸಿಟಿವ್ ದರ ಶೇ. 4-5 ಇರುವ ಸ್ಥಳಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು. ಬೆಂಗಳೂರಿನಲ್ಲಿ ಪಾಸಿಟಿವ್ ದರವು ಸುಮಾರು ಶೇ.1ರಷ್ಟು ಇದೆ ಎಂದು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿಯಲ್ಲಿ ಯಾವುದೇ ತಾಂತ್ರಿಕ ದೋಷವಿಲ್ಲ. ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆ ವ್ಯವಸ್ಥೆಯು ಸ್ವಯಂ ಮೌಲ್ಯಮಾಪನ ವ್ಯವಸ್ಥೆಯಾಗಿದೆ. ಕೆಲವು ಸಂದರ್ಭಗಳಲ್ಲಿ, ಜನರು ಸರಿಯಾದ ವಲಯ ವರ್ಗೀಕರಣವನ್ನು ಆಯ್ಕೆ ಮಾಡಿಲ್ಲ. ಈ  ಕಾರಣಕ್ಕಾಗಿ ತೆರಿಗೆ ಪಾವತಿ ಸಂಗ್ರಹ ಕಡಿಮೆಯಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com