ಕೋವಿಡ್-19: ರಾಜ್ಯದಲ್ಲಿಂದು 1,186 ಹೊಸ ಪ್ರಕರಣ, 1,776 ಚೇತರಿಕೆ; 24 ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ.
Published: 09th August 2021 07:36 PM | Last Updated: 09th August 2021 07:45 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಗುಣಮುಖರಾಗಿ 1,776 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2859552ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23, 316 ಸಕ್ರಿಯ ಪ್ರಕರಣಗಳು ಇರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೋವಿಡ್-19 ಸೋಂಕಿನಿಂದ ಇಂದು 24 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 36, 817ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 0.89 ರಷ್ಟಿದ್ದು, ಮರಣ ಪ್ರಮಾಣ ಶೇ. 2.02 ರಷ್ಟಿದೆ.
ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣದಲ್ಲಿ ತೀವ್ರ ರೀತಿಯ ಇಳಿಕೆಯಾಗಿದ್ದು, 296 ಹೊಸ ಪ್ರಕರಣಗಳು ದೃಢಪಟ್ಟಿದೆ. 410 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
Today's Media Bulletin 09/08/2021
— K'taka Health Dept (@DHFWKA) August 9, 2021
Please click on the link below to view bulletin.https://t.co/3Le5J7BgZS @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/OK4n09eUYu