ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 99. 9 ವಿದ್ಯಾರ್ಥಿಗಳು ಉತ್ತೀರ್ಣ

2020-21 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99. 9 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2020-21 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99. 9 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಜುಲೈ 19 ಮತ್ತು 22 ರಂದು ನಡೆದ ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವರನ್ನು ಕಳುಹಿಸಿ ಪರೀಕ್ಷೆ ಬರೆಸಿದ್ದರಿಂದ ಆ ವಿದ್ಯಾರ್ಥಿಯನ್ನು ಮಾತ್ರ ಅನುತೀರ್ಣ ಮಾಡಲಾಗಿದೆ ಎಂದರು.

157 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. 562 ರಿಂದ 625 ಅಂಕಗಳನ್ನು ಪಡೆದವರಿಗೆ A+ ಗ್ರೇಡ್ ನೀಡಲಾಗಿದೆ. ಬಿ ಗ್ರೇಡ್‌ನಲ್ಲಿ 2,87,694 ವಿದ್ಯಾರ್ಥಿಗಳು, ಸಿ ಗ್ರೇಡ್‌ನಲ್ಲಿ 1,13,610 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ  ಎಂದು ಸಚಿವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು https:// sslc.karnataka.gov.in  ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು ಎಂದು ಸಚಿವ ಬಿ. ಸಿ. ನಾಗೇಶ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com