ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನಲ್ಲಿ ರಾಜ್ಯದ 51.19 ಲಕ್ಷ ರೈತರಿಗೆ 1, 023 ಕೋಟಿ ರೂ. ಬಿಡುಗಡೆ
ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
Published: 09th August 2021 05:32 PM | Last Updated: 09th August 2021 05:32 PM | A+A A-

ಕೃಷಿ ಸಚಿವ ಬಿ. ಸಿ. ಪಾಟೀಲ್
ಬೆಂಗಳೂರು: ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡುತ್ತಿದೆ.
ಈ ಅನುದಾನವನ್ನು 2 ಸಾವಿರ ರೂ. ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಇಲ್ಲಿಯವರಿಗೆ 55.06 ಲಕ್ಷ ರೈತ ಕುಟುಂಬಗಳು 1ನೇ ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ. 2019ರ ಮಾರ್ಚ್ ನಿಂದ ಜುಲೈ 2021ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6940.07 ಕೋಟಿ ರೂ. ಗಳ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂ. ಗಳ ಆರ್ಥಿಕ ಸಹಾಯಧವನ್ನು ನೀಡಲಾಗಿದೆ. ಆಧಾರಿತ ಆಧಾರಿತ ಡಿಬಿಟಿ ಮುಖಾಂತರ ಪಾವತಿಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ಅತಿ ಹೆಚ್ಚು ಶೇಕಡವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ ಎಂದು ಬಿಸಿ ಪಾಟೀಲ್ ತಿಳಿಸಿದ್ದಾರೆ.