ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಕನ್ನಡ ಪುಸ್ತಕ ನೀಡಿ: ಸರ್ಕಾರದ ಆದೇಶ
ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Published: 10th August 2021 01:35 PM | Last Updated: 10th August 2021 09:53 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ್ದ ಸಂದರ್ಭ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸೂಚನೆಯನ್ನು ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸರ್ಕಾರದ ಅಧೀನದ ಎಲ್ಲಾ ಅಧಿಕಾರಿಗಳು ಪಾಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡಿ ಅನಗತ್ಯ ಖರ್ಚು ಮಾಡುವ ಬದಲು ಕನ್ನಡ ಪುಸ್ತಕಗಳನ್ನು ನೀಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ.
ಮುಖ್ಯಮಂತ್ರಿ @BSBommai ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. pic.twitter.com/SwSd4ZG5ca
— CM of Karnataka (@CMofKarnataka) August 10, 2021