ಕಾನೂನು- ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆ; ಗೃಹ ಇಲಾಖೆಯ ದಕ್ಷತೆ ಹೆಚ್ಚಿಸಲು ಸರ್ಕಾರ ಬದ್ಧ: ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಿ ಹೇಳಿದ್ದಾರೆ.

ಗೃಹ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅಪರಾಧ ಕತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಬೇಕು ಪೊಲೀಸರಲ್ಲಿ ದಕ್ಷತೆ ಪ್ರಾಮಾಣಿಕ ಮತ್ತಷ್ಟು ಹೆಚ್ಚಾಗಬೇಕು, ಪೊಲೀಸರು ಇನ್ನಷ್ಟು ಜನಸ್ನೇಹಿ ಆಗಿರಬೇಕು, ಭೂ ಮಾಫಿಯಾ ಚಟುವಟಿಕೆಗಳಿಂದ ದೂರವಿರಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು
.
ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ  ಸೂಚಿಸಿದರು.ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು.

ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು.ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.. ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು ಎಂದು ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದರು.

ಗೃಹ ಇಲಾಖೆಯ ದಕ್ಷತೆ ಹೆಚ್ಚಿಸಲು ಸರ್ಕಾರ ಬದ್ಧ:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಎದುರಾಗಿರುವ ಸವಾಲುಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಂಬರುವ ಕೋವಿಡ್ ಸವಾಲುಗಳು, ನ್ಯಾಯಾಲಯಗಳ ಆದೇಶ ಪರಿಪಾಲನೆ ಸಂದರ್ಭದಲ್ಲಿ ಪೊಲೀಸರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿರುವುದಾಗಿ ತಿಳಿಸಿದರು. ಪೊಲೀಸ್ ವ್ಯವಸ್ಥೆಯಲ್ಲಿ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ನೀಡಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಮೇಲ್ದರ್ಜೆಗೇರಿಸುವ, ಕರ್ನಾಟಕ ಮೀಸಲು ಪೊಲೀಸ್ ಪಡೆ, ಅಗ್ನಿಶಾಮಕ ವಿಭಾಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಪೊಲೀಸ್ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗುವುದು, ಇಲಾಖೆಯ ದಕ್ಷತೆಯನ್ನು ಹೆಚ್ಚಿಸುವುದು ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com