ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  591 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು  591 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು  ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕೇಂದ್ರ (ಸಂಗ್ರಹ ಚಿತ್ರ)
ಅಂಗನವಾಡಿ ಕೇಂದ್ರ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು  591 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು  ಆಸಕ್ತರು ಅರ್ಜಿ ಸಲ್ಲಿಸಬಹುದು.

ಈ ಕುರಿತಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಆದೇಶ ಹೊರಡಿಸಿದ್ದು, ಒಟ್ಟು 591 ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಲಾಗಿದೆ. ಈ ಪೈಕಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 87, ಬಾಗಲಕೋಟೆಯಲ್ಲಿ 146, ತುಮಕೂರು ಜಿಲ್ಲೆಯಲ್ಲಿ 358 ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ. 4, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ. 

ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಪ್ರಸ್ತುತ ಖಾಲಿ ಇರುವ ಹಾಗೂ ಸೆಪ್ಟೆಂಬರ್ 2021 ರ ಅಂತ್ಯಕ್ಕೆ ಖಾಲಿ ಆಗುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿವರ, ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ ಅರ್ಹತೆಗಳ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ.

ಶೈಕ್ಷಣಿಕ ಅರ್ಹತೆಗಳು
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್‌ ಆಗಿರಬೇಕು. ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
- ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.

ವಯೋಮಿತಿ: ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. 

ಅರ್ಜಿ ಸಲ್ಲಿಸುವುದು ಹೇಗೆ?
- anganwadirecruit.kar.nic.in ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ.
- ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
- 'ಸಲ್ಲಿಸಿ' ಎಂಬಲ್ಲಿ ಕ್ಲಿಕ್ ಮಾಡಿ
- ತೆರೆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
2. ವಾಸಸ್ಥಳ ದೃಢೀಕರಣ ಪತ್ರ.
3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
4. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
10. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com