ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್!

ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಪ್ಪಳ: ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ ತಡೆಯುವಿಕೆ, ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಸೇರಿದಂತೆ ಆದ್ಯತಾ ಕ್ಷೇತ್ರಗಳಾದ ಗುಣಾತ್ಮಕ ಶಿಕ್ಷಣ, ಶಾಲಾ ಭೌತಿಕ ಸೌಲಭ್ಯಗಳು, ಮಕ್ಕಳ ಸಂರಕ್ಷಣೆ, ಕ್ರೀಡಾ ಹಾಗೂ ದೈಹಿಕ ಚಟುವಟಿಕೆಗಳ ಉತ್ತೇಜನ ಹಾಗೂ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಉದ್ದೇಶವನ್ನು ಮಕ್ಕಳ ಆಯವ್ಯಯವು ಹೊಂದಿದ್ದು, ಇದರಂತೆ 0-3, 3-6, 6-8, 9-11, 12-14 ಮತ್ತು 15-18 ವಯೋಮಾನದ ಮಕ್ಕಳಿಗೆ ಅವಶ್ಯಕತೆಗಳ ಆಧಾರದ ಮೇಲೆ ಪ್ರತ್ಯೇಕವಾಗಿ ಅನುದಾನ ನೀಡಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

2011 ರ ಜನಗಣತಿಯ ಪ್ರಕಾರ 0-14 ವಯೋಮಾನದ ಮಕ್ಕಳು ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 29.5 ರಷ್ಟಿದ್ದಾರೆ ಮತ್ತು ರಾಜ್ಯದಲ್ಲಿ ಶೇ 25.7 ರಷ್ಟಿದ್ದಾರೆ.

ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳು ಇದಕ್ಕಾಗಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಬೇಕಿದ್ದು, ಈ ಸಮಿತಿಯ ವಿವಿಧ ರೀತಿಯ ಕ್ರೀಡೆ, ಸಾಹಿತ್ಯ, ರಂಗಭೂಮಿ ಮತ್ತು ಇತರ ಮಕ್ಕಳ ಸಂಬಂಧಿತ ಚಟುವಟಿಕೆಗಳತ್ತ ಗಮನಹರಿಸಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಜಿಲ್ಲಾ ಪಂಚಾಯತ್ ನಿಂದ ಬಜೆಟ್'ಗೆ ಅನುಮೋದನೆ ದೊರೆಯುತ್ತಿದ್ದಂತೆಯೇ ಯೋಜನೆಗಲನ್ನು ರೂಪಿಸಿ, ಜಾರಿಗೆ ತರಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com