ಸೆಪ್ಟಂಬರ್ 3ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ: ಬೊಮ್ಮಾಯಿ ಸರ್ಕಾರಕ್ಕೆ ಮೊದಲ 'ಅಗ್ನಿಪರೀಕ್ಷೆ'!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ ಮತ್ತು ಬಂಡಾಯಗಾರರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ ಮತ್ತು ಬಂಡಾಯಗಾರರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ, ಇದೇ ವೇಳೆ ರಾಜ್ಯ ಚುನಾವಣಾ ಆಯೋಗ  ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಬುಧವಾರದಂದು ಚುನಾವಣಾ ದಿನಾಂಕ ಘೋಷಣೆ ಮಾಡಿದೆ.

ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಹುಬ್ಬಳ್ಳಿ-ಧಾರವಾಡ, ಇದರಲ್ಲಿ 82 ವಾರ್ಡ್‌ಗಳು, ಕಲಬುರಗಿ (55 ವಾರ್ಡ್‌ಗಳು) ಮತ್ತು ಬೆಳಗಾವಿ (58 ವಾರ್ಡ್‌ಗಳು). ದೊಡ್ಡಬಳ್ಳಾಪುರ, ತರೀಕೆರೆ ಮತ್ತು ಇತರ ಕೆಲವು ಸ್ಥಳಗಳ ನಗರ ಪಾಲಿಕೆಗಳಿಗೆ ಸೆಪ್ಟಂಬರ್ 3ರಂದು ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಮೂರು ಕ್ಷೇತ್ರಗಳು ಉತ್ತರ ಕರ್ನಾಟಕದಲ್ಲಿರುವುದರಿಂದ ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ಅವರ ಮೇಲೆ ಹೆಚ್ಚಿನ ಒತ್ತಡ ಬೀಳಲಿದೆ.

ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಕೂಡ ಉತ್ತಮ ಸಂಖ್ಯೆಯ ಲಿಂಗಾಯತ ಮತದಾರರಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಅವರ ಸಂಪುಟದ 8 ಸಚಿವರು ಲಿಂಗಾಯತ ಸಮುದಾಯಕ್ಕೇ ಸೇರಿರುವ ಕಾರಣ ಇದನ್ನು ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ರಾಜ್ಯವು 19 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಸಾಕ್ಷಿಯಾಯಿತು. ಈ 16 ಉಪಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಡಿಸೆಂಬರ್ 2020 ರಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪಕ್ಷವು ಹೇಳಿಕೊಂಡಿದೆ.

ಆಗಸ್ಟ್ 16ರಂದು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದಾರೆ. ಆಗಸ್ಟ್ 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆಗಸ್ಟ್ 26 ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com