ಮೇಕೆದಾಟು ಯೋಜನೆಗೆ ಬೇರೆ ರಾಜ್ಯಗಳ ಅನುಮತಿ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾವೇರಿ ಕೊಳ್ಳದ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಮಾಹಿತಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾವೇರಿ ಕೊಳ್ಳದ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಮಾಹಿತಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. 

ಕುಡಿಯುವ ನೀರಿನ ಯೋಜನೆಗಳನ್ನು ಸ್ಥಾಪಿಸುವಾಗ ಯಾವುದೇ ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಆಂಧ್ರಪ್ರದೇಶದ ಯೋಜನೆಗಳಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಕುಡಿಯುವ ನೀರಿನ ಯೋಜನೆಗಳಿಗೆ ಅಂತಹ ಅನುಮತಿ ಅಗತ್ಯವಿಲ್ಲ. 

ನಾನು ಅದನ್ನು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಗಮನಕ್ಕೆ ತಂದಿದ್ದೇನೆ ಎಂದು ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಸಚಿವರು ನೀಡಿದ್ದ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮೇಕೆದಾಟು ಯೋಜನೆ ಕುರಿತು ಹಾಸನದ ಜನತಾದಳ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಶೇಖಾವತ್, ಈ ಯೋಜನೆಗೆ ಇತರ ನದಿ ತೀರದ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ ಎಂದು ಲೋಕಸಭೆಗೆ ತಿಳಿಸಿದ್ದರು.

ನಾವು ದೆಹಲಿಗೆ ಹೋಗಿ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಯ ವಿರುದ್ಧ ಸರ್ಕಾರ ತನ್ನ ಕಾನೂನು ಹೋರಾಟವನ್ನು ಮುಂದುವರಿಸುತ್ತದೆ ಮತ್ತು ಯೋಜನೆಯನ್ನು ಕಾರ್ಯಗತಗೊಳಿಸುತ್ತದೆ.  ಈ ಯೋಜನೆಯನ್ನು ತೆರವುಗೊಳಿಸದಂತೆ ತಮಿಳುನಾಡು ಕೇಂದ್ರವನ್ನು ಒತ್ತಾಯಿಸಿದ್ದರೂ, ಕರ್ನಾಟಕವು ಇದು ಕೇವಲ ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ಇದರಲ್ಲಿ ಯಾವುದೇ ನೀರಾವರಿ ಯೋಜನೆಯ ಅಂಶವಿಲ್ಲ ಎಂದು ವಾದಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com