ಬೆಂಗಳೂರು: ಪ್ರತಿಷ್ಟಿತ ವಿಶ್ವವಿದ್ಯಾನಿಲಯಗಳ ನಕಲಿ ಪದವಿ ಪ್ರಮಾಣ ಪತ್ರ ನೀಡುತ್ತಿದ್ದ ಆರೋಪಿಗಳ ಬಂಧನ

ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಜ್ಯೂಕೇಷನಲ್ ಟ್ರಸ್ಟ್ ಕಚೇರಿ ತೆರೆದು, ಪಿಯುಸಿ ಪಾಸ್ ಅಥವಾ ಫೇಲ್ ಆದ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆದು, ರಾಜ್ಯ ಮತ್ತು ಹೊರ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ಪರೀಕ್ಷೆ ಬರೆಯದ ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಕೇವಲ 4 ತಿಂಗಳ ಅವಧಿಯಲ್ಲಿ ‌ಅಂತಿಮ ವರ್ಷದ ಬಿಟೆಕ್, ಎಂಬಿಎ‌, ಬಿಕಾಂ ಹಾಗೂ ಇತರೆ ಪದವಿ ಪ್ರಮಾಣ ಪತ್ರಗಳನ್ನು ಕೊಡುತ್ತಿದ್ದರು.

ಈ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಂಜಾಬ್ ಮೂಲದ ಇಬ್ಬರೂ ಆರೋಪಿಗಳು, ನಗರದ ಹೊರವಲಯದಲ್ಲಿ ಐಟಿಐ ಟ್ರೈನಿಂಗ್ ಸಂಸ್ಥೆಯೊಂದನ್ನು ಆರಂಭಿಸಿ ಎಜ್ಯೂಕೇಶನ್ ಟ್ರಸ್ಟ್ ಹೆಸರಿನಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದರು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com