ರಾಜ್ಯದಲ್ಲಿ ಇಂದು ಕೊರೋನಾಗೆ 22 ಬಲಿ, ಬೆಂಗಳೂರಿನಲ್ಲಿ 425 ಸೇರಿ 1669 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36933ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36933ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1669 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,26,401ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 455 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,32,220ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1672 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,66,739ಕ್ಕೆ ಏರಿಕೆಯಾಗಿದೆ. ಇನ್ನು 22,703 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com