ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ: ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Published: 14th August 2021 12:41 AM | Last Updated: 14th August 2021 02:09 PM | A+A A-

ಬೆಂಕಿಗೆ ಆಹುತಿಯಾಗಿರುವ ಕಾರು
ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಗಾರ್ವೆಬಾವಿಪಾಳ್ಯದ ಶಿವಕುಮಾರ್, ಸಾಗರ್ ಮತ್ತು ನವೀನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ಸತೀಶ್ ರೆಡ್ಡಿ ದೊಡ್ಡ ದೊಡ್ಡ ಕಾರುಗಳಲ್ಲಿ ಓಡಾಡುತ್ತಿದ್ದರು. ಅಂತಹವರಿಗೆ ಬುದ್ದಿ ಕಲಿಸಬೇಕು ಎಂಬ ಉದ್ದೇಶದಿಂದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.