ಆಗಸ್ಟ್ 19 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಸಿದ್ಧತೆ ಆರಂಭಿಸಿದ ಶಿಕ್ಷಣ ಇಲಾಖೆ
ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಶಿಕ್ಷಣ ಇಲಾಖೆಯು ತನ್ನ ಸಿದ್ಧತೆಗಳನ್ನು ಆರಂಭಿಸಿದ್ದು, ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ ನೀಡಲಾಗಿದ್ದ ಗ್ರೇಡ್ ನಿಂದ ಅಸಮಾಧಾನಗೊಂಡಿದ್ದವರಿಗೆ ಪರೀಕ್ಷೆ ನಡೆಸಲಿದೆ.
Published: 14th August 2021 01:37 AM | Last Updated: 14th August 2021 02:09 PM | A+A A-

ವಿದ್ಯಾರ್ಥಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಶಿಕ್ಷಣ ಇಲಾಖೆಯು ತನ್ನ ಸಿದ್ಧತೆಗಳನ್ನು ಆರಂಭಿಸಿದ್ದು, ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ ನೀಡಲಾಗಿದ್ದ ಗ್ರೇಡ್ ನಿಂದ ಅಸಮಾಧಾನಗೊಂಡಿದ್ದವರಿಗೆ ಪರೀಕ್ಷೆ ನಡೆಸಲಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಹಿಂದೆ ಕೊಡುತ್ತಿದ್ದ ಗ್ರೇಡ್ ಪದ್ಧತಿಯನ್ನು ಈ ಸಲ ಕೈಬಿಡಲಾಗಿತ್ತು. ಒಟ್ಟು 7 ಹಂತಗಳಲ್ಲಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಅಂಕ ನಿಗದಿ ಮಾಡಿ ಫಲಿತಾಂಶ ನೀಡಲಾಗಿತ್ತು. ಆದರೆ ಆ ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾ ಆಡಳಿತಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುರುವಾರ ತಿಳಿಸಿದ್ದಾರೆ.
ಪರೀಕ್ಷೆಯನ್ನು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯ ಸಿದ್ಧತೆಗಳನ್ನು ಪ್ರತಿ ಜಿಲ್ಲೆಯ ಜಿಲ್ಲಾ ಆಡಳಿತಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.
ಪರೀಕ್ಷೆಗಳನ್ನು ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ನಿಗದಿಪಡಿಸಲಾಗಿದೆ. ಇನ್ನು ರಾಜ್ಯದ 5546 ಕಾಲೇಜುಗಳಿಂದ 18,414 ವಿದ್ಯಾರ್ಥಿಗಳು 187 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.