ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ತಜ್ಞರ ಸಭೆಯಲ್ಲಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ 1 ಮತ್ತು 2ನೇ ಅಲೆಯ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಲಾಗುವುದು. ಅದಕ್ಕಾಗಿ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಾಯಂಕಾಲ ಕೋವಿಡ್ ಸಂಬಂಧಿ ಸಭೆಯನ್ನು ತಜ್ಞರ ಜೊತೆ ಮಾಡುತ್ತೇನೆ, ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಜನರ ನಿತ್ಯ ಕೆಲಸಗಳಿಗೆ ತೊಂದರೆಯಾಗದಂತೆ ಏನು ಕಠಿಣ ಕ್ರಮ ಕೈಗೊಳ್ಳಬಹುದು ಎಂದು ವೈಜ್ಞಾನಿಕವಾಗಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ, ತಜ್ಞರ ಸಲಹೆ ಪಡೆದುಕೊಂಡು, ವೈಜ್ಞಾನಿಕವಾಗಿ ಚರ್ಚಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಜನರಿಗೆ, ಜನರ ಬದುಕಿಗೆ ತೊಂದರೆಯಾಗಬಾರದು, ಹಾಗೆಯೇ ಕೊರೋನಾ ಹರಡಬಾರದು ಎನ್ನುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ನಾವು ಒಂದು ಮತ್ತು ಎರಡನೇ ಅಲೆಯ ಅನುಭವಗಳನ್ನು ಅವಲೋಕನ ಮಾಡಿ ಈ ಬಾರಿ ಕೋವಿಡ್ ನಿರ್ವಹಣೆಯಲ್ಲಿ ಆ ಆನುಭವದಿಂದ ಬದಲಾವಣೆ ಮಾಡಬಹುದು ಎಂಬ ವಿಶ್ವಾಸವಿದೆ. ಹಂತಹಂತವಾಗಿ ಸಂಪೂರ್ಣವಾಗಿ ಕೋವಿಡ್ ನಿಯಂತ್ರಣ ಮಾಡುವ ಬಗ್ಗೆ ಗಮನಹರಿಸಲಾಗುವುದು ಎಂದರು.

ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ ಆಚರಿಸಲಾಗುವುದು. ಕೋವಿಡ್ ಒಂದನೇ, ಎರಡನೇ ಅಲೆಯ ಅನುಭವದಿಂದ ಈ ಬಾರಿ ಕೋವಿಡ್ ನಿರ್ವಹಣೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಬೇಕೆಂಬ ಚಿಂತನೆ ಇದೆ. ಪ್ರಿವೆನ್ಷನ್ ಇಸ್ ಬೆಟರ್ ಎಂಬ ದೃಷ್ಟಿಯಿಂದ ಹಂತಹಂತವಾಗಿ ಸಂಪೂರ್ಣ ನಿಯಂತ್ರಣ ಮಾಡಲಾಗುವುದು. ಹಲವು ವಿಷಯಗಳಲ್ಲಿ ಇಂದು ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಹಲವಾರು ಸವಾಲುಗಳನ್ನು ಎದುರಿಸಿ ಯಶಸ್ವಿಯಾಗಿದೆ.ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ದೇಶಕ್ಕೆ ಮಾದರಿಯಾಗಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com