ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಸಚಿವ ಬಿಸಿ ನಾಗೇಶ್ ಆದೇಶ
ತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪವನ್ ಮತ್ತು ಶಶಾಂಕ್ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
Published: 15th August 2021 02:53 PM | Last Updated: 15th August 2021 03:00 PM | A+A A-

ಶಿಕ್ಷಣ ಸಚಿವ ಬಿ. ಸಿ. ನಾಗೇಶ್
ಬೆಂಗಳೂರು: ತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪವನ್ ಮತ್ತು ಶಶಾಂಕ್ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ವಿದ್ಯಾರ್ಥಿ ಸಾವಿನ ಸುದ್ದಿ ತಿಳಿದು ಆಘಾತವಾಯಿತು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿರುವುದಾಗಿ ಹೇಳಿದ್ದಾರೆ.
ಈ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ.
— B.C Nagesh (@BCNagesh_bjp) August 15, 2021