ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲರಿಂದ ಆತ್ಮೀಯ ಸ್ವಾಗತ
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.
Published: 16th August 2021 12:10 PM | Last Updated: 16th August 2021 12:10 PM | A+A A-

ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಸ್ವಾಗತ ಕೋರಿದ ಸಿಎಂ
ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.
ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಘನತೆವೆತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಸೋಮವಾರ ಬೆಳಗ್ಗೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಹಾರ ಹಾಕಿ ಮೈಸೂರು ಪೇಟವನ್ನು ತೊಡಿಸಿ ಸ್ವಾಗತಿಸಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ನಗರದ ಜವಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಭಾಗಿಯಾಗಲಿದ್ದಾರೆ.
Karnataka CM Basavaraj Bommai, along with Governor Thaawarchand Gehlot, received Vice President M Venkaiah Naidu at Bengaluru airport.
— ANI (@ANI) August 16, 2021
The Vice President is on a visit to Bengaluru today. pic.twitter.com/yzpVnt04db