ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 340 ಸೇರಿ ಇಂದು 1,298 ಪ್ರಕರಣ ಪತ್ತೆ; 32 ಸಾವು!

ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಇಂದು 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಇಂದು 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 29,31,827ಕ್ಕೆ ಏರಿಕೆಯಾಗಿದೆ.

 ಇಂದು ಒಂದೇ ದಿನದಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 37039ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. 

ಬೆಂಗಳೂರಿನಲ್ಲಿ ಇಂದು 340 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1233512ಕ್ಕೆ ಏರಿಕೆಯಾಗಿದೆ. ಸೋಂಕು ಹೆಚ್ಚಳವಾದರೂ ಮರಣ ಪ್ರಮಾಣ ಇಳಿಕೆಯಾಗಿದ್ದು, ಇಂದು ನಗರದಲ್ಲಿ ಒಬ್ಬರು ಸೋಂಕಿತರು ಮಾತ್ರ ಸಾವನ್ನಪ್ಪಿದ್ದಾರೆ.  

ರಾಜ್ಯದಲ್ಲಿ ಇಂದು 1833 ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,73,281ಕ್ಕೆ ಏರಿಕೆಯಾಗಿದೆ. ಇನ್ನು 21481 ಸಕ್ರೀಯ ಪ್ರಕರಣಗಳಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com