ಬೆಂಗಳೂರು: ಶೇ.94 ರಷ್ಟು ಅರ್ಹ ಮಂದಿಗೆ ಕೊರೋನಾ ಲಸಿಕೆಯ ಮೊದಲ ಡೋಸ್ ಪೂರ್ಣ

ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಕಡೆ ಇಳಿಮುಖವಾಗುತ್ತಿದ್ದರೆ ಇನ್ನೊಂದು ದಿಕ್ಕಿನಲ್ಲಿ ಲಸಿಕೆ ವಿತರಣೆ ವೇಗ ಹೆಚ್ಚುತ್ತಿದೆ. ಬೆಂಗಳೂರಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳ ಪೈಕಿ ಶೇ.94ರಷ್ಟು ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಕಡೆ ಇಳಿಮುಖವಾಗುತ್ತಿದ್ದರೆ ಇನ್ನೊಂದು ದಿಕ್ಕಿನಲ್ಲಿ ಲಸಿಕೆ ವಿತರಣೆ ವೇಗ ಹೆಚ್ಚುತ್ತಿದೆ. ಬೆಂಗಳೂರಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳ ಪೈಕಿ ಶೇ.94ರಷ್ಟು ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ ಈವರೆಗೂ 10,62,262 ಫಲಾನುಭವಿಗಳ ಪೈಕಿ 9,97,288 ಜನರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದ್ದಾರೆ. 

ಅತೀ ಹೆಚ್ಚು ಲಸಿಕೆ ವಿತರಣೆಯಲ್ಲಿ ರಾಜ್ಯದಲ್ಲಿ ಬಿಬಿಎಂಪಿ ನಿರ್ವಹಣೆಯ ಪ್ರದೇಶವು ಎರಡನೇ ಸ್ಥಾನದಲ್ಲಿದ್ದು, ಶೇ.65.41ರಷ್ಟು ಜನರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇನ್ನು 2,26,148 ಮಂದಿ 2ನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಬಿಬಿಎಂಪಿ ನಿರ್ವಹಣೆಯ ಪ್ರದೇಶಗಳಲ್ಲಿ ಆಗಸ್ಟ್ 12 ರ ವೇಳೆಗೆ 94,42,274 ಫಲಾನುಭವಿಗಳ ಪೈಕಿ 61,76,873 ಜನರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 21,95,040 ಜನರು ಎರಡನೇ ಡೋಸ್ ಪಡೆದಿದ್ದಾರೆಂದು ಮಂಜುನಾಥ್ ಅವರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com