ಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡಿದವರ ವಿರುದ್ಧ ಕ್ರಮ, ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ಕಡಿತ ಇಲ್ಲ: ಸಿಎಂ ಬೊಮ್ಮಾಯಿ

ರಾಜ್ಯದ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳ ಹೆಚ್ಚಳ, ಬಡವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನನ್ನ ಕೆಲಸವನ್ನು ಮುಖ್ಯಮಂತ್ರಿಯಾಗಿ ಪ್ರಾರಂಭ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಮ್ಮ ನಿವಾಸ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತಮ್ಮ ನಿವಾಸ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳ ಹೆಚ್ಚಳ, ಬಡವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನನ್ನ ಕೆಲಸವನ್ನು ಮುಖ್ಯಮಂತ್ರಿಯಾಗಿ ಪ್ರಾರಂಭ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊನ್ನೆ ಸ್ವಾತಂತ್ರ್ಯ ದಿನದಂದು ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದೇನೆ. ಆ ನಿಟ್ಟಿನಲ್ಲಿ ಅವರು ಕಾರ್ಯೋನ್ಮುಖವಾಗಿದ್ದಾರೆ ಎಂದರು.

ಜನರಿಗೆ ತಲುಪುವ ರೀತಿಯಲ್ಲಿ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೆ ತರಲು ಅಧಿಕಾರಿಗಳು ಕೆಲಸ ಮಾಡಬೇಕೆಂದು ಎಂದು ಸಹ ನಾನು ಸೂಚಿಸಿದ್ದು ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಪ್ರಾರಂಭವಾಗುತ್ತದೆ ಎಂದರು.

ನೆಗೆಟಿವ್ ರಿಪೋರ್ಟ್ ನಲ್ಲಿ ಗೋಲ್ ಮಾಲ್: ಹಣ ನೀಡಿದರೆ ಕೊರೋನಾ ನೆಗೆಟಿವ್ ವರದಿ ನೀಡುವ ಅಕ್ರಮ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಯಾರು ಕೊರೋನಾ ರಿಪೋರ್ಟ್ ಬಗ್ಗೆ ಅಕ್ರಮ ನಡೆಸುತ್ತಿದ್ದಾರೋ ಅಂತವರನ್ನು ಪತ್ತೆಹಚ್ಚಿ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ, ಅಲ್ಲದೆ ನೆಗೆಟಿವ್ ರಿಪೋರ್ಟ್ ಎಂದು ಸುಳ್ಳು ವರದಿ ನೀಡಿದವರ ಮೇಲೆ ಮತ್ತೊಮ್ಮೆ ಟೆಸ್ಟ್ ಮಾಡಿಸಲು ಸೂಚಿಸುತ್ತೇನೆ ಎಂದರು.

ನಮ್ಮಲ್ಲಿ ಪೆಟ್ರೋಲ್ ಬೆಲೆ ಕಡಿತ ಇಲ್ಲ: ಪೆಟ್ರೋಲ್ ಬೆಲೆ ತಮಿಳುನಾಡಿನಲ್ಲಿ 3 ರೂಪಾಯಿ ಕಡಿತವಾಗಿರುವ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದಾಗ, ನಮ್ಮ ರಾಜ್ಯದಲ್ಲಿ ಆ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com