ಡಿಜೆ ಹಳ್ಳಿ, ಕೆಜಿ ಹಳ್ಳಿ ದಂಗೆಯ ಆರೋಪಿಗಳನ್ನು ಕೂಡಲೇ ಬಂಧಿಸಿ: ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ದಂಗೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ದಂಗೆಯ ನಂತರದ ದೃಶ್ಯ
ದಂಗೆಯ ನಂತರದ ದೃಶ್ಯ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ದಂಗೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ರಾಷ್ಟ್ರೀಯ ತನಿಖಾ ತಂಡಕ್ಕೆ ಇಂದು ಆದೇಶ ನೀಡಿದೆ. 

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರದ ತನಿಖೆಯನ್ನು ವಹಿಸಿಕೊಂಡ ಐದು ತಿಂಗಳ ನಂತರ ಕಳೆದ ಫೆಬ್ರವರಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯದಲ್ಲಿ 247 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಡಿಜೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 109 ವ್ಯಕ್ತಿಗಳ ಮೇಲೆ ಆರೋಪ ಹೊರಿಸಲಾಗಿದೆ.  ಇನ್ನು ಕೆ ಜೆ ಹಳ್ಳಿಯ 138 ಆರೋಪಿಗಳ ವಿರುದ್ಧ ಕೆಜಿ ಹಿಂಸಾಚಾರಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. 

ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸೋದರಳಿಯ ನವೀನ್ ಕುಮಾರ್ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದರು ಎಂಬ ಕುಂಟು ನೆಪವೊಡ್ಡಿ ಕಳೆದ ವರ್ಷ ಆಗಸ್ಟ್ 11 ರ ರಾತ್ರಿ ಎರಡೂ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ಭುಗಿಲೆದ್ದಿತು. ಉದ್ರಿಕ್ತ ಗುಂಪು ಶಾಸಕರ ಮನೆ ಮೇಲೆ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಬೆಂಕಿಯಿಟ್ಟು ಹಿಂಸಾಚಾರವೆಬ್ಬಿಸಿತ್ತು. 

ಕಳೆದ ಸೆಪ್ಟೆಂಬರ್‌ನಲ್ಲಿ ಆರಂಭವಾದ ತನಿಖೆಯ ನಂತರ, ಎನ್ಐಎ ಈ ದಾಳಿಯ ಹಿಂದೆ ರಾಜಕೀಯ ಕುತಂತ್ರವಿದ್ದಿರಬಹುದೆಂದು ಶಂಕಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com