ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ. ಪೂರ್ವ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಒಟ್ಟು 15 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರಲ್ಲಿ ಐವರು ವಿದೇಶಿ ಮಹಿಳೆಯರೂ ಸೇರಿದ್ದರು. ಅವರ ವಿರುದ್ಧ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಮಹಿಳೆಯರನ್ನು ಅವರ ದೇಶಕ್ಕೆ ಕಳುಹಿಸುವ ಬಗ್ಗೆ ಪೊಲೀಸರು ಅವರ ದೇಶದ ರಾಜತಾಂತ್ರಿಕ ಕಚೇರಿ ಜೊತೆ ಮಾತುಕತೆ ನಡೆಸಿದ್ದರು. ಅದರ ನಡುವೆಯೇ ಮಹಿಳೆಯರು ಪರಾರಿಯಾಗಿದ್ದಾರೆ. 

ಸಿಬ್ಬಂದಿ ಜೊತೆ ನೀರು ಬೇಕೆಂದು ಕೇಳಿದ್ದರು. ನೀರು ತರಲು ಸಿಬ್ಬಂದಿ ಒಳಕ್ಕೆ ಹೋದ ಸಮಯದಲ್ಲಿ ೬ ಮಂದಿ ವಿದೇಶಿ ಮಹಿಳೆಯರು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ. ಗೋಡೆ ಹಾರುವ ಸಮಯದಲ್ಲಿ ಓರ್ವ ಮಹಿಳೆ ಕೆಳಕ್ಕೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಉಳಿದ ಐವರು ಮಹಿಳೆಯರು ಪರಾರಿಯಾಗುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಿಂದುಳಿದ ಗಾಯಾಳು ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಪರಾರಿಯಾಗಿರುವ ಮಹಿಳೆಯರ ಭಾವಚಿತ್ರಗಳನ್ನು ಏರ್ ಪೋರ್ಟ್, ರೈಲ್ವೇ ನಿಲ್ದಾಣ ಹಾಗೂ ಬಸ್ ನಿಲ್ದಾಣ ಅಧಿಕಾರಿಗಳ ಬಳಿ ಹಂಚಿಕೊಳ್ಳಲಾಗಿದೆ ಎಂದು ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com