ಕನಕಪುರ ಜಿಲೆಟಿನ್ ಬ್ಲಾಸ್ಟ್ ಗೆ ಹೊಸ ಟ್ವಿಸ್ಟ್: ಸ್ಫೋಟ ಆಕಸ್ಮಿಕವಲ್ಲ; ಮೃತ ವ್ಯಕ್ತಿಯ ವಿರುದ್ಧವೇ ಎಫ್ ಐಆರ್!

ಕನಕಪುರದಲ್ಲಿ ಕಾರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧವೇ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕನಕಪುರದಲ್ಲಿ ಕಾರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧವೇ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.

ಕನಕಪುರ ತಾಲೂಕಿನ ಮರಳೆಗವಿ ಮಠದ ಪಕ್ಕದಲ್ಲಿ ಸೋಮವಾರ ಕಾರಿನಲ್ಲಿ ಸ್ಫೋಟ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಫೋಟದಲ್ಲಿ ಸಾವನ್ನಪ್ಪಿದ ಮಹೇಶ್ ವಿರುದ್ಧವೇ ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ಮಹೇಶ್‌ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ. 

ಕಾರಿನಲ್ಲಿ ಸಂಭವಿಸಿದ ಸ್ಪೋಟ ಆಕಸ್ಮಿಕವಲ್ಲ, ಆತ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ, ವಿದಿ ವಿಜ್ಞಾನ ಪ್ರಯೋಗಾಲಯ ತಂಡ ನಿಖರವಾದ ಕಾರಣಕ್ಕಾಗಿ ಶೋಧ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನಕಪುರ ನಿವಾಸಿಯಾದ ಮಹೇಶ್ ಕಳೆದ ಕೆಲವು ತಿಂಗಳುಗಳಿಂದ ಹಣಕಾಸಿನ ಮುಗ್ಗಟ್ಟಿಗೆ ಒಳಗಾಗಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರಿನಲ್ಲಿ ಜಿಲೆಟಿನ್ ಕಡ್ಡಿ ಇರಿಸಿಕೊಂಡು ಆತನೇ ತನ್ನ ಜೀವವನನ್ನು ಅಂತ್ಯಗೊಳಿಸಿಕೊಂಡಿರುವ ಸಾಧ್ಯತೆಯಿದೆ, ಕಾರಿನಲ್ಲೇ ಆತ ಸುಮಾರು 2 ಗಂಟೆಗಲ ಕಾಲ ಕುಳಿತಿರುವುದನ್ನು ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ನೋಡಿದ್ದಾರೆ. ಸಾಯುವ ಮುನ್ನ ಆತ ತನ್ನ ಸ್ನೇಹಿತರ ಜೊತೆ ಫೋನಿನಲ್ಲಿ ಮಾತನಾಡಿದ್ದಾನೆ,  ಆತನ ಫೋನ್ ಕಾಲ್ ಮತ್ತು ರೆಕಾರ್ಡ್ ಗಳನ್ನು ಪರಿಶೀಲಿಸುತ್ತಿದ್ದೇವೆ.

ಆತನ ಗಣಿಗಾರಿಕೆಗೆ ಜಿಲೆಟಿನ್ ಪೂರೈಸುತ್ತಿದ್ದ ಹಲವರನ್ನು ನಾವು ವಿಚಾರಣೆ ನಡೆಸುತ್ತಿದ್ದೇವೆ, ಸ್ಪೋಟಕಗಳನ್ನು ಸಾಗಿಸುವ ವೇಳೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತೆ ಎಂಬುದನ್ನು  ಪತ್ತೆ ಹಚ್ಚುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ, ಮರಣೋತ್ತರ ಪರೀಕ್ಷೆ ನಂತರ ಮಹೇಶ್ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ಮುಂದೆ ಆತನ ಸಹೋದರ ಹೇಳಿಕೆ ದಾಖಲಿಸಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com