ರಾಷ್ಟ್ರೀಯ ಶಿಕ್ಷಣ ನೀತಿ ಪ್ರಾಯೋಗಿಕ ಜಾರಿಗೆ ರಾಜ್ಯ ಸರ್ಕಾರ ಚಿಂತನೆ!

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ
ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. 

ಸಭೆಯಲ್ಲಿ, ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ಮತ್ತು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದು, ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ಸಲಹೆ ನೀಡಿದರು ಎಂದು ತಿಳಿದುಬಂದಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ, ನಿನ್ನೆ ನಡೆದ ಸಭೆಯಲ್ಲೂ ನೀತಿಯನ್ನು ಯಾವ ರೀತಿ ಕಾರ್ಯಗತಗೊಳಿಸಬೇಕೆಂಬುದರ ಕುರಿತಂತೆಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. 

ಸಭೆ ಕುರಿತು ನಿನ್ನೆ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿಯವರು, ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿದೆ. ಹೀಗಾಗಿ ಶಿಕ್ಷಣ ನೀತಿ ಅನುಷ್ಠಾನದ ಕುರಿತು ರಾಜ್ಯಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕೆಂದು ಹೇಳಿದರು. 

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರೆ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಫಾಪಿಸುವ ಕುರಿತು ಕೂಡ ರೂಪುರೇಷೆಗಳನ್ನು ಸಿದ್ಧಪಡಿಸಬೇಕು. ಖಾಸಗಿಯವರ ಸಹಯೋಗ ಪಡೆದುಕೊಳ್ಳಬೇಕು. ರಾಜ್ಯದ ಜಿಇಆರ್ ಶೇ.32ರಷ್ಟು ಇದ್ದು, ಮುದೆ ಇದನ್ನು ಶೇ.50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com