ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 318 ಸೇರಿ ಇಂದು 1,432 ಪ್ರಕರಣ ಪತ್ತೆ; 27 ಸಾವು!

ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿದ್ದರೂ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇಂದು 1,432 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿದ್ದರೂ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇಂದು 1,432 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 27 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,088ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,157ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,538 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,76,377ಕ್ಕೆ ಏರಿಕೆಯಾಗಿದೆ. ಇನ್ನು 21,133 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,76,977 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,432 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.80ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com