ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇರಲಿಲ್ಲ: ಶಶಿಕಲಾ ಜೊಲ್ಲೆ

ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇಲ್ಲ ಎಂದು ಸ್ವತಃ ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರೇ ಹೇಳಿದ್ದಾರೆ.
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ

ಬೆಂಗಳೂರು: ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇಲ್ಲ ಎಂದು ಸ್ವತಃ ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರೇ ಹೇಳಿದ್ದಾರೆ.

ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆಯಾಗಿದ್ದಾಗ ಶಶಿಕಲಾ ಜೊಲ್ಲೆ ವಿರುದ್ಧ ಮೊಟ್ಟೆ ಟೆಂಡರ್ ಹಗರಣದ ಆರೋಪ ಕೇಳಿಬಂದಿತ್ತು. ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಾಗ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್(ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಲಾಗಿತ್ತು ಮತ್ತು ಇದು ವಿವಾದಕ್ಕೆ ಕಾರಣವಾಗಿತ್ತು.

ಸಚಿವರಿಗೆ ಹೀಗೆ ಝೀರೋ ಟ್ರಾಫಿಕ್(ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್ ನೀಡಿದ ನಿರ್ದೇಶನ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆ, ತಮಗೆ ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇರಲಿಲ್ಲ. ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಬರುವಾಗ ಝೀರೋ ಟ್ರಾಫಿಕ್ ಕೇಳಿರಲಿಲ್ಲ. ಅದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ, ನಾನು ಕಾರಿನಲ್ಲಿ ಕೂತ ಬಳಿಕ ಝೀರೋ ಟ್ರಾಫಿಕ್ ಇದ್ದಿದ್ದು ಗೊತ್ತಾಯಿತು ಎಂದು ಸ್ಪಷ್ಟನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com