ಸರ್ಕಾರಿ ಸಂಸ್ಥೆ, ನಿಗಮಗಳಲ್ಲೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ. 1 ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಬುಧವಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ. 1 ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಬುಧವಾರ ಹೇಳಿದೆ.

ತೃತಿಯ ಲಿಂಗಿ ಸಮುದಾಯದ ಪರ ಕೆಲಸ ಮಾಡುತ್ತಿರುವ ಸಂಗಮ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಾಧೀಶ ಎನ್.ಎಸ್. ಸಂಜಯ್ ಗೌಡ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. 

ಈ ಹಿಂದೆ ನ್ಯಾಯಾಲಯ ನೀಡಿದ ನಿರ್ದೇಶನಗಳನ್ನು ಅನುಸರಿಸಿ, ರಾಜ್ಯ ಸರ್ಕಾರವು ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮ 9 ಕ್ಕೆ ತಿದ್ದುಪಡಿ ಮಾಡಿತ್ತು.

ಯಾವುದೇ ಸೇವೆ ಅಥವಾ ಹುದ್ದೆಯಲ್ಲಿ ಪ್ರತಿ ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿಯನ್ನು ಕಡ್ಡಾಯ ಮಾಡಲು ಸರ್ಕಾರ ನಿಯಮ 9ಕ್ಕೆ ತಿದ್ದುಪಡಿ ಮಾಡಿ, ಉಪ ನಿಯಮ (1) (ಡಿ) ಸೇರಿಸಿತ್ತು.

 ತೃತೀಯ ಲಿಂಗಿಗಳ ( ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 2(ಕೆ) ಅಡಿಯಲ್ಲಿ ಈ ಸಮುದಾಯಕ್ಕೆ ಉದ್ಯೋಗದಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com