ಬೆಂಗಳೂರು: ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ
ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ.
Published: 20th August 2021 11:47 AM | Last Updated: 20th August 2021 11:47 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ.
ಮೃತ ನಿತೇಶ್ ಹಾಗೂ ಆತನ ಸ್ನೇಹಿತ ಪ್ರಶಾಂತ್ ತಡರಾತ್ರಿಯವರೆಗೂ ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆ ಆರಂಭವಾಗಿದ್ದು, ಕೊನೆಗೆ ಜಗಳ ತಾರಕಕ್ಕೇರಿ ಪ್ರಶಾಂತ್ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ. ಸ್ವಲ್ಪ ಹೊತ್ತಿನ ಬಳಿಕ ಇಬ್ಬರೂ ಸುಮ್ಮನಾಗಿ ಮಲಗಿದ್ದರು. ಮಲಗಿ ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಪ್ರಶಾಂತ್ ಕೋಪದಿಂದ್ದ ಮತ್ತೆ ಎಚ್ಚರಗೊಂಡಿದ್ದಾನೆ. ನಂತರ ನಿತೇಶ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಡಿ.ಜೆ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗುತಿದ್ದ ಪ್ರಶಾಂತ್, ಪಪ್ಪಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.