ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,350 ಪ್ರಕರಣ ಪತ್ತೆ, 18 ಸಾವು; 4 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ನಿನ್ನಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,350 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,37,427ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಿನ್ನಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,350 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,37,427ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 18 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,123ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 260 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,769ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,648 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,79,433ಕ್ಕೆ ಏರಿಕೆಯಾಗಿದೆ. ಇನ್ನು 20,845 ಸಕ್ರೀಯ ಪ್ರಕರಣಗಳಿವೆ. 

ರಾಜ್ಯದ ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ರಾಜ್ಯಾದ್ಯಂತ ಇಂದು 1,57,509 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,350 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.85ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com