ಮುಖ್ಯಮಂತ್ರಿಯಾದ ಬಳಿಕ ಮೂರನೇ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ಭೇಟಿ!

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.!
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ ಹೋಗುತ್ತಿರುವುದು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪಡೆಯಲು ಮತ್ತು ರಾಜ್ಯದ ಯೋಜನೆಗಳನ್ನು ಕೇಂದ್ರ ಸಚಿವರುಗಳೊಂದಿಗೆ ಚರ್ಚಿಸಲು. ಅದರೊಟ್ಟಿಗೆ ಸಂಪುಟ ರಚನೆ ನಂತರ ಖಾತೆ ಹಂಚಿಕೆ ನಂತರ ರಾಜಕೀಯ ಸ್ಥಿತಿಗತಿಗಳನ್ನು ಕೂಡ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಕೇಂದ್ರದ ಹಲವು ಸಚಿವರುಗಳೊಂದಿಗೆ ಮಾತುಕತೆ ನಡೆಸಲು ಭೇಟಿಯ ಅವಧಿಯನ್ನು ಕೇಳಿದ್ದು ಅವರಿಂದ ದೃಢಪಡಿಸುವಿಕೆ ಬಂದ ಕೂಡಲೇ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಹೆಚ್ಚಿನ ಲಸಿಕೆ ನೀಡುವಂತೆ ಕೇಳಿಕೊಳ್ಳಲಿದ್ದಾರೆ. ಕರ್ನಾಟಕಕ್ಕೆ ಸದ್ಯ 65 ಲಕ್ಷ ಡೋಸ್ ಲಸಿಕೆ ಪ್ರತಿವರ್ಷ ಸಿಗುತ್ತದೆ, ಅದನ್ನು 1 ಕೋಟಿಗೆ ಹೆಚ್ಚಳ ಮಾಡಬೇಕೆಂಬುದು ಬೊಮ್ಮಾಯಿಯವರ ಉದ್ದೇಶವಾಗಿದೆ. ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com