ಮಂಗಳೂರು: ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸಾವು

ರೈಲಿನಡಿಗೆ ಸಿಲುಕಿ ಇಬ್ಬರೂ ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ನಗರದ ಮಹಾಕಾಳಿ ಪಡ್ಪು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ರೈಲಿನಡಿಗೆ ಸಿಲುಕಿ ಇಬ್ಬರೂ ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ನಗರದ ಮಹಾಕಾಳಿ ಪಡ್ಪು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ವಸಂತಿ(50), ಪ್ರೇಮಾ (48) ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಎಂದಿನಂತೆ ರೈಲು ಹಳಿ ದಾಟಿ ಬೀಡಿ ಕೊಡಲೆಂದು ಬೀಡಿ ಬ್ರ್ಯಾಂಚ್‌ಗೆ ಹೋಗುವಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮೃತ ಮಹಿಳೆಯರಿಬ್ಬರೂ ಬೀಡಿ ಕಾರ್ಮಿಕರಾಗಿದ್ದು, ನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದರು.

ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com