ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,151 ಪ್ರಕರಣ ಪತ್ತೆ, 10 ಮಂದಿ ಮೃತ; ಬೆಂಗಳೂರಿನಲ್ಲಿ 'ಶೂನ್ಯ' ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,151 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,39,767ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,151 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,39,767ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,155ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 270 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,35,306ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸಾವು ಸಂಭವಿಸಿಲ್ಲ.

ರಾಜ್ಯದಲ್ಲಿ ಇಂದು 1,442 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,82,331ಕ್ಕೆ ಏರಿಕೆಯಾಗಿದೆ. ಇನ್ನು 20,255 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,06,364 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,151 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.08ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com