ಸಾಮಾಜಿಕ ಜಾಲತಾಣದಲ್ಲಿ ತಾಲಿಬಾನ್ ಪರ ಪೋಸ್ಟ್: ಜಮಖಂಡಿಯಲ್ಲಿ ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾಗಲಕೋಟೆ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಆಸೀಫ್ ಗಲಗಲಿ ಬಂಧನಕ ವ್ಯಕ್ತಿಯಾಗಿದ್ದಾನೆ. ಈತ ಆಗಸ್ಟ್ 20 ರಂದು ಫೇಸ್ ಬುಕ್ ನಲ್ಲಿ ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದಾನೆ. ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಕಿಡಿಕಾರಿದ್ದಾರೆ. 

ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ವ್ಯಕ್ತಿಯನ್ನು ಬಂಧನಕ್ಕೊಳಪಡಿಸುವಂತೆ ಸಾಕಷ್ಟು ಜನರು ಆಗ್ರಹಿಸುತ್ತಿದ್ದರು. 

ಆಸೀಫ್ ಗಲಗಲಿಯಿಂದ ಸಮಯದಾಯದ ಎಲ್ಲರಿಗೂ ಕೆಟ್ಟ ಹೆಸರು ಬರುತ್ತದೆ. ಆತನ ವಿರುದ್ಧ ದೇಶದ್ರೋಹದ ಕೇಸ್ ಹಾಕಿ. ಈ ರೀತಿ ಸ್ಟೇಟಸ್ ಹಾಕುವವರಿಗೆ ಪಾಠವಾಗಬೇಕು. ಗಲಗಲಿ ಹುಡುಕಿ ಬಂಧಿಸಿ ಎಂದು ಪೊಲೀಸರನ್ನು ಆಗ್ರಹಿಸಿದ್ದರು. 

ಇದರಂತೆ ನದಾಫ್ ಯಾಕುಬ್ ಎಂಬುವವರು ಜಮಖಂಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಗಾಗಿ ಹುಡುಕಾಟ ನಡೆಸಿ ಇದೀಗ ಆತನನ್ನು ಬಂಧನಕ್ಕೊಳಪಡಿಸಿದ್ದಾರೆ. 

ಎಸ್'ಪಿ ಲೋಕೇಶ್ ಜಗಲಸರ್ ಅವರು ಮಾತನಾಡಿ, ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಮಾಡಿದ್ದರ ಕುರಿತು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಆತನ ವಿರುದ್ಧ ಭಾರತೀಯ ದಂಡ ಸಂಹಿತೆ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com