ಹೊಸ ಶಿಕ್ಷಣ ನೀತಿ ಅಡಿಯಲ್ಲಿ 7 ಲಕ್ಷ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬಹುದು: ಅಶ್ವತ್ಥ್ ನಾರಾಯಣ್
ಪಿಯುಸಿ 2ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸುಮಾರು 7 ಲಕ್ಷ ವಿದ್ಯಾರ್ಥಿಗಳು ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ 2020ರ ಅಡಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್...
Published: 24th August 2021 07:23 PM | Last Updated: 24th August 2021 07:23 PM | A+A A-

ಅಶ್ವತ್ಥ್ ನಾರಾಯಣ್
ಕಲಬುರಗಿ: ಪಿಯುಸಿ 2ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸುಮಾರು 7 ಲಕ್ಷ ವಿದ್ಯಾರ್ಥಿಗಳು ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ 2020ರ ಅಡಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಗುಲ್ಬರ್ಗಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಹೊಸ ಶಿಕ್ಷಣ ನೀತಿ -2020 ಕುರಿತು ಒಂದು ದಿನದ ಸೆಮಿನಾರ್‌ನಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ್ದು, ಈ ವೇಳೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಅಶ್ವತ್ಥ್ ನಾರಾಯಣ್, ಕರ್ನಾಟಕವು ಹೊಸ ಶಿಕ್ಷಣ ನೀತಿ ಆರಂಭಿಸಿದ ದೇಶದ ಮೊದಲ ರಾಜ್ಯವಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೋಮಾ ಕೋರ್ಸ್‌ಗಳ 1ನೇ ವರ್ಷದ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ ಎಂದರು.
ಹೊಸ ಶಿಕ್ಷಣ ನೀತಿಯಂತೆ ವಿದ್ಯಾರ್ಥಿಗಳಿಗೆ ಕಲಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ 8 ಲಕ್ಷ ವಿದ್ಯಾರ್ಥಿಗಳು ಪಿಯುಸಿ 2ನೇ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಲ್ಲಿ, 7 ಲಕ್ಷ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಬಹುದು, ಆದರೆ ಕೆಲವರು ಐಟಿಐ ಅಥವಾ ಉದ್ಯೋಗ ಆಧಾರಿತ ಅಲ್ಪಾವಧಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಮತ್ತು ಉಳಿದವರು ಉದ್ಯೋಗಗಳನ್ನು ಆರಿಸಿಕೊಳ್ಳಬಹುದು ಎಂದರು.
ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಎರಡು ಭಾಷೆಗಳನ್ನು ಕಲಿಸಲಾಗುವುದು ಮತ್ತು ಅವುಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲಾಗುವುದು. ವಿದ್ಯಾರ್ಥಿಗಳಿಗೆ ಎರಡನೇ ಭಾಷೆಯನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡಲಾಗಿದೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದರು.
10ನೇ/ಪಿಯುಸಿ 2ನೇ ವರ್ಷದವರೆಗೆ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ. ಆದರೆ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಎರಡು ಭಾಷೆಯ ನೀತಿ ಇರುತ್ತದೆ. "ನಾವು ಕನ್ನಡವನ್ನು ಮೊದಲ ಭಾಷೆಯಾಗಿ ಕಡ್ಡಾಯಗೊಳಿಸಿದ್ದೇವೆ" ಎಂದು ಅವರು ಹೇಳಿದರು.