ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆ: ಉತ್ತಮ ಆದಾಯ ನಿರೀಕ್ಷೆಯಲ್ಲಿ ರೈತರು

ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ.  77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ  ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು. 
ಬಿತ್ತನೆ ಕಾರ್ಯದ ಚಿತ್ರ
ಬಿತ್ತನೆ ಕಾರ್ಯದ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ.  77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ  ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು. 

ಕೋವಿಡ್ ನಿರ್ಬಂಧ ನಡುವೆಯೂ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಲಭ್ಯತೆಯಿಂದಾಗಿ ಬೇಡಿಕೆ ಹಾಗೂ ದರ ಕಡಿಮೆಯಾಗಿರುವುದರಿಂದ ಈ ಬಾರಿ ರೈತರು ಉತ್ತಮ ಫಸಲು ಪಡೆಯುವ ನಿರೀಕ್ಷೆ ಹೊಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

1990ರ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.  ಈ ಮಧ್ಯದ ವರ್ಷದಲ್ಲಿ ಮಳೆ ಕೊರತೆಯಿಂದಾಗಿ 50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿತ್ತು.  ಆಗಸ್ಟ್ 21 ರವರೆಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಮಳೆಯಾಶ್ರಿತ 54. 52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಶೇ. 96. 49 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 68. 66 ರಷ್ಟು ಬಿತ್ತನೆಯಾಗಿತ್ತು. ಇದು ಅತ್ಯುತ್ತಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಕಿಅಂಶಗಳ ಪ್ರಕಾರ  ಬೀದರ್, ಕಲಬುರಗಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಮತ್ತು ಉಡುಪಿಯಲ್ಲಿ ಶೇ. 100 ರಷ್ಟು ಬಿತ್ತನೆಯಾಗಿದೆ. ಉಳಿದಂತೆ ಚಿತ್ರದುರ್ಗದಲ್ಲಿ ಶೇ. 99. 86, ಬೆಳಗಾವಿ ಮತ್ತು ವಿಜಯಪುರದಲ್ಲಿ ಕ್ರಮವಾಗಿ ಶೇ. 97. 68 ಮತ್ತು
94. 74 ರಷ್ಟು ಮಳೆಯಾಗಿದೆ.  ಮುಂದಿನ ವಾರ ಮತ್ತಷ್ಟು ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಲ್ಲಿ ಅಧಿಕಾರಿಗಳಿದ್ದಾರೆ. 

ರಾಗಿ, ಗೋಧಿ, ಅಕ್ಕಿ ಮತ್ತಿತರ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದರೊಂದಿಗೆ ರೈತರು ಉತ್ತಮ ಆದಾಯ ಪಡೆಯುವ ನಿರೀಕ್ಷೆಯಿದೆ ಎಂದು  ಬೆಂಗಳೂರಿನ ಕೃಷಿ ವಿಜ್ಞಾನ  ವಿಶ್ವವಿದ್ಯಾನಿಲಯದ ಮಾಜಿ ರಿಜಿಸ್ಟ್ರರ್ ಪ್ರೊಫೆಸರ್ ರಾಜೇಗೌಡ  ಹೇಳಿದ್ದಾರೆ. 

ಕನಿಷ್ಠ ಬೆಂಬಲ ಬೆಲೆ ನೀತಿಯಡಿ ಬೆಳೆಯನ್ನು ಖರೀದಿಸುತ್ತೇವೆ. ನೂತನ ಎಪಿಎಂಸಿ ಕಾಯ್ದೆ ಪ್ರಕಾರ ರೈತರು ತಮ್ಮ ಬೆಳೆಯನ್ನು ಮುಕ್ತ ಮಾರುಕಟ್ಟೆಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಅವರಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಆದರೆ, ಸರ್ಕಾರದ ಖರೀದಿ ನೀತಿ ಮತ್ತು ಮಾರ್ಕೆಟಿಂಗ್ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಳವಳ ವ್ಯಕ್ತಪಡಿಸಿದ್ದಾರೆ.  

ಉತ್ಪನ್ನಗಳು ಹೆಚ್ಚಾಗಲಿ ಅಥವಾ ಕಡಿಮೆಯಾಗಲಿ, ರೈತರು ಬಂದಿದ್ದನ್ನು ಸ್ವೀಕರಿಸುವ ಹಂತದಲ್ಲಿದ್ದಾರೆ. ಬರ ಅಥವಾ ಪ್ರವಾಹವಿದ್ದಲ್ಲಿ, ಅವರು ಕಡಿಮೆ ಉತ್ಪನ್ನ ಮತ್ತು ಕಡಿಮೆ ಹಣವನ್ನು ಪಡೆಯುತ್ತಾರೆ. ಇಳುವರಿ ಉತ್ತಮವಾಗಿದ್ದಾಗ, ಅವರಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಪಂಜಾಬ್‌ನಂತಹ ರಾಜ್ಯಗಳಲ್ಲಿ ಯಾರಾದರೂ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಕೊಂಡರೆ ಎರಡೂವರೆ ವರ್ಷಗಳ ಕಾಲ ಜೈಲಿಗೆ ಹಾಕಲಾಗುತ್ತದೆ. ಆದರೆ, ನಮ್ಮ ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ನೀತಿ ಕೇವಲ ಕಣ್ಣೊರೆಸುವ ತಂತ್ರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com