ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರ್ಕಾರ ಚಿಂತನೆ: ಸಚಿವ ಸುನೀಲ್ ಕುಮಾರ್

ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. 
ಸಚಿವ ಸುನೀಲ್ ಕುಮಾರ್
ಸಚಿವ ಸುನೀಲ್ ಕುಮಾರ್

ಉಡುಪಿ: ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. 

ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಇದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನೊಂದು ಸುತ್ತಿನ ಮಾತುಕತೆಯ ಬಳಿಕ ಈ ಸಂಬಂಧ ಅತ್ಯಂತ ಶೀಘ್ರವೇ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಮುಂದೆ ನಿಗಮದ ಘೋಷಣೆಯನ್ನು ಮಾಡಲಾಗುವುದು ಎಂದು ತಿಳಿಸಿದರು. 

ರಾಜ್ಯದಲ್ಲಿ ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಯಾವ ರೀತಿ ಆಚರಿಸಬೇಕೆಂಬುದರ ಬಗ್ಗೆ ಹೊಸ ರೀತಿಯ ಚಿಂತನೆಯನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಶಿಕ್ಷಣ ಇಲಾಖೆಯು ಯುವ ಸಬಲೀಕರಣ ಇಲಾಖಾ ಸಭೆ ನಡೆಸಿ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಾಡಿನಲ್ಲಿ ದೇಶಭಕ್ತಿ ರೂಪಿಸುವ ಯೋಜನೆಗೆ ಶೀಘ್ರದಲ್ಲೇ ಅಂತಿಮ ಸ್ವರೂಪ ನೀಡಲಾಗುತ್ತದೆ ಎಂದಿದ್ದಾರೆ. 

ಇದೇ ವೇಳೆ ನಾಡಗೀತೆ ಕುರಿತ ಚರ್ಚೆಗಳಿಗೆ ಪ್ರತಿಕ್ರಿಯೆ ನೀಡಿ, ಇನ್ನು ನಾಡಗೀತೆ ಎಷ್ಟು ನಿಮಿಷವಿರಬೇಕು, ಕನ್ನಡ ತಾಯಿ ಭುವನೇಶ್ವರಿಯ ಚಿತ್ರದ ಏಕರೂಪ ಕುರಿತು ತಾರ್ಕಿಕ ಅಂತ್ಯ, ಕನ್ನಡದಲ್ಲಿ ಪೊಲೀಸ್ ಪರೇಡ್ ಹಾಗೂ ಸ್ಮಾರ್ಟ್/ಪ್ರಿಪೇಯ್ಡ್ ಮೀಟರ್ ಸಾಧಕ, ಬಾಧಕ ಚಿಂತನೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com