ಡಿಲಿಮಿಟೇಷನ್ ಪ್ರಕ್ರಿಯೆ ಪೂರ್ಣಗೊಂಡರೆ ವರ್ಷಾಂತ್ಯದಲ್ಲಿ ಬಿಬಿಎಂಪಿಗೆ ಚುನಾವಣೆ ಸಾಧ್ಯತೆ

ಎಲ್ಲವೂ ಅಂದುಕೊಂಡಂತೆ ನಡೆದರೇ ಬಿಬಿಎಂಪಿಯ 243 ವಾರ್ಡ್ ಗಳಿಗೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ. ಇನ್ನೂ ಕೆಲವೇ ವಾರಗಳಲ್ಲಿ ಮೀಸಲಾತಿ ಮತ್ತು ವಾರ್ಡ ನ ಡಿಲಿಮಿಟೇಶನ್ ಪ್ರಕ್ರಿಯೆ ಪೂರ್ಣಗೊಳಿಸುವ ನಿರೀಕ್ಷೆಯಿದೆ
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದರೇ ಬಿಬಿಎಂಪಿಯ 243 ವಾರ್ಡ್ ಗಳಿಗೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ. ಇನ್ನೂ ಕೆಲವೇ ವಾರಗಳಲ್ಲಿ ಮೀಸಲಾತಿ ಮತ್ತು ವಾರ್ಡ ನ ಡಿಲಿಮಿಟೇಶನ್ ಪ್ರಕ್ರಿಯೆ ಪೂರ್ಣಗೊಳಿಸುವ ನಿರೀಕ್ಷೆಯಿದೆ.

198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿ ಕೌನ್ಸಿಲ್‌ನ ಅವಧಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊನೆಗೊಂಡಿತು ಮತ್ತು ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಎಸ್. ರಘು ನೇತೃತ್ವದ ಬಿಬಿಎಂಪಿ ಜಂಟಿ ಆಯ್ಕೆ ಸಮಿತಿಯು 243 ವಾರ್ಡ್‌ಗಳ ಪರವಾಗಿ ತನ್ನ ಶಿಫಾರಸುಗಳನ್ನು ಸಲ್ಲಿಸಿತು. ಇದರ ನಂತರ, ಡಿಲಿಮಿಟೇಶನ್ ಪ್ರಕ್ರಿಯೆ ಆರಂಭವಾಗಿತ್ತು.

ಡಿಲಿಮಿಟೇಶನ್ ಮೇಲೆ ನಾವು ಇದುವರೆಗೆ ಎರಡು ಮೂರು ಸಭೆಗಳನ್ನು ನಡೆಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಗೆ ಹೆಚ್ಚಿನ ಗ್ರಾಮಗಳನ್ನು ಸೇರಿಸಲು ನಗರದ ಹೊರವಲಯದಲ್ಲಿರುವ ಕ್ಷೇತ್ರಗಳ ಶಾಸಕರ ಬೇಡಿಕೆಯಿಟ್ಟಿದ್ದಾರೆ, ನಾವು ಈ ಸಂಬಂಧ ಕೆಲಸ ಮಾಡುತ್ತಿದ್ದೇವೆ. ನಾವು ಈ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವ ಆಶಯ ಹೊಂದಿದ್ದೇವೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಒಂದು ವಾರದ ಸಮಯದಲ್ಲಿ ಡಿಲಿಮಿಟೇಶನ್ ಬಗ್ಗೆ ಸ್ಪಷ್ಟತೆ ದೊರೆಯಲಿದೆ ಎಂದು ಬಿಬಿಎಂಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ. ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಮತ್ತು ಅದನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು ಎಂದು ಸಮಿತಿಯ ಭಾಗವಾಗಿದ್ದ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಇದರ ನಂತರ, ಆಕ್ಷೇಪಣೆಗಳನ್ನು ಕರೆಯಲಾಗುವುದು ಹಾಗೂ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ನಾವು ಆಶಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಸಲು ವಿಳಂಬವಾಗುತ್ತಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಡ ಬಿಜೆಪಿಯನ್ನು ದೂಷಿಸುತ್ತಿದೆ.

ಚುನಾವಣೆಗಳನ್ನು ನಡೆಸಲು ಉತ್ಸುಕರಾಗಿರುವ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ. ಡಿಸೆಂಬರ್ 2020 ರಲ್ಲಿ, ಕರ್ನಾಟಕ ಹೈಕೋರ್ಟ್ ಆರು ವಾರಗಳಲ್ಲಿ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು, ಆದರೆ 243 ವಾರ್ಡ್‌ಗಳನ್ನು ಒಳಗೊಂಡ ಹೊಸ ಬಿಬಿಎಂಪಿ ಕಾಯಿದೆಗೆ ಒತ್ತು ನೀಡಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು, ಇದಕ್ಕೆ ರಾಜ್ಯ ಚುನಾವಣಾ ಆಯೋಗ ಆಕ್ಷೇಪಣೆ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com